ಬಾಲ್ಯದಲ್ಲಿಯೇ ಒಳ್ಳೆಯ ಸಂಸ್ಕಾರ ನೀಡಿ : ಡಿ.ವೈ.ಬಸ್ಸಾಪೂರ

0
27
loading...

ಚಿಕ್ಕೋಡಿ 14: ಹಿರಿಯರು ತಮ್ಮ ಮಕ್ಕಳಿಗೆ ಬಾಲ್ಯದಲ್ಲಿಯೇ ಒಳ್ಳೆಯ ಸಂಸ್ಕಾರ ನೀಡಿದರೇ ಮಕ್ಕಳು ಹಿರಿಯರನ್ನು ಗೌರವಿಸುತ್ತವೆ ಎಂದು ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಡಿ.ವೈ.ಬಸ್ಸಾಪೂರ ಹೇಳಿದರು.
ಪಟ್ಟಣದ ಐಎಂಎ ಸಭಾ ಭವನದಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಹಿರಿಯ ನಾಗರಿಕರ ಕ್ಷೇಮಾವೃದ್ಧಿ ಸಂಘ, ಪುರಸಭೆ, ಭಾರತೀಯ ವೈಧ್ಯಕೀಯ ಸಂಘ ಮತ್ತು ರೋಟರಿ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಹಿರಿಯರು ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ನಂತರ ಪುರಸಭೆ ಅಧ್ಯಕ್ಷ ನರೇಂದ್ರ ನೇರ್ಲೆಕರ ಮಾತನಾಡಿದರು, ಡಾ.ಬಿ.ಬಿ.ಚೌಗಲಾ ನ್ಯಾಯಾಧೀಶ ಎಚ್. ವಿರೂಪಾಕ್ಷಯ್ಯ ಕಾರ್ಯಕ್ರಮದಲ್ಲಿ ನ್ಯಾಯಾದೀಶರಾದ ಶ್ರೀಮತಿ ವೈ.ಎಲ್.ಲಾಡಖಾನ, ಆನಂದ ಎಂ, ರವಿ, ರೋಟರಿ ಕ್ಲಬ್ ಅಧ್ಯಕ್ಷ ಸತೀಶ ಕುಲಕರ್ಣಿ, ಸರಕಾರಿ ಅಭಿಯೋಜಕ ಎಂ,ಎನ್,ಉತ್ತೂರ, ವಿಜಯ ಮಾಂಜ್ರೇಕರ, ಎಸ್.ಟಿ.ಮುನ್ನೋಳ್ಳಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಶೇಖರ ಮಿರ್ಜಿ ಸ್ವಾಗತಿಸಿದರು. ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಾಳಾಸಾಹೇಬ ಸಂಗ್ರೋಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಖ.ಆರ್.ಪಾಟೀಲ ನಿರೂಪಿಸಿದರು. ಪುರಸಭೆ ಮುಖ್ಯಾಧಿಕಾರಿ ಮಹಾವೀರ ಬೋರನ್ನವರ ವಂದಿಸಿದರು.

loading...

LEAVE A REPLY

Please enter your comment!
Please enter your name here