ಈರುಳ್ಳಿ ಬೆಳೆ ನಷ್ಟ : 1 ಎಕರೆಗೆ 9 ಸಾವಿರ ಪರಿಹಾರ

0
18
loading...

ಬೆಂಗಳೂರು, ನ.13- ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಎಕರೆಗೆ 9 ಸಾವಿರ ರೂ. ಪರಿಹಾರ, ಡಿ.9ರಿಂದ 10 ದಿನಗಳವರೆಗೆ ಬೆಳಗಾವಿಯಲ್ಲಿ ವಿಧಾನ ಮಂಡಳ ಅಧಿವೇಶನ, ನ.27ರಂದು ಗುಲ್ಬರ್ಗದಲ್ಲಿ ಸಚಿವ ಸಂಪುಟಸಭೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನ.9ರಿಂದ 20ರ ವರೆಗೂ ಅಧಿವೇಶನ ನಡೆಯಲಿದೆ ಎಂದು ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಈ ಬಾರಿ 85 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯನ್ನು ಬಿತ್ತನೆ ಮಾಡಲಾಗಿತ್ತು. ಒಟ್ಟು 10-11ಲಕ್ಷ ಟನ್ ಇಳುವರಿ ನಿರೀಕ್ಷಿಸಲಾಗಿತ್ತು. ಬೆಳಗಾವಿ, ಚಿತ್ರದುರ್ಗ, ಗದಗ, ದಾವಣಗೆರೆ, ಧಾರವಾಡ ಸೇರಿದಂತೆ ರಾಜ್ಯಾದ್ಯಂತ ಸುಮಾರು 40 ಎಕರೆಯಲ್ಲಿ ಈರುಳ್ಳಿ ಬೆಳೆ ನಷ್ಟವಾಗಿದ್ದು, ಪ್ರತಿ ಎಕರೆಗೂ ಸರ್ಕಾರ 9 ಸಾವಿರ ರೂ. ಪರಿಹಾರ ನೀಡಲು ನಿರ್ಧರಿಸಿದೆ. ಪರಿಹಾರ ಪಡೆದ ರೈತರಿಂದ ಸರ್ಕಾರ ಈರುಳ್ಳಿಯನ್ನು ಖರೀದಿಸುವುದಿಲ್ಲ. ಅಳಿದುಳಿದ ಈರುಳ್ಳಿಯನ್ನು ರೈತರು ಮಾರುಕಟ್ಟೆಯಲ್ಲಿ ಮುಕ್ತವಾಗಿ ಮಾರಾಟ ಮಾಡಿಕೊಳ್ಳಬಹುದು ಎಂದರು.
ಈರುಳ್ಳಿ ಬೆಳೆ ನಷ್ಟ ಪಾವತಿಗಾಗಿ ರಾಜ್ಯ ಸರ್ಕಾರ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಅಗತ್ಯವಾದರೆ ಇನ್ನಷ್ಟು ಹಣ ಬಿಡುಗಡೆ ಮಾಡಲು ಸಿದ್ದವಿದೆ. ಪ್ರತಿ ಎಕರೆಗೆ 4500 ಸಾವಿರ ರೂ. ನಷ್ಟವಾಗಿದೆ. ಸರ್ಕಾರ ತನ್ನ ಬೊಕ್ಕಸದಿಂದ 4500 ರೂ.ಗಳನ್ನು ರೈತರಿಗೆ ನೇರವಾಗಿ ಪಾವತಿ ಮಾಡಲಿದೆ ಎಂದು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ 18 ಮಯೂರ ಹೋಟೆಲ್‍ಗಳನ್ನು ಖಾಸಗಿಗೆ ವಹಿಸಲು ನಿರ್ಧರಿಸಲಾಗಿದೆ. ಖಾಸಗಿ ಸಹಾಭಾಗಿತ್ವದಲ್ಲಿ ಈ ವಸತಿ ಧಾಮಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಹಾಗೂ ಪಂಗಡ ಜನ ಹೆಚ್ಚು ವಾಸ ಮಾಡುವ ಪ್ರದೇಶದಲ್ಲಿ ಒಂದು ಸಾವಿರ ಕಂಪ್ಯೂಟರ್ ಕೇಂದ್ರಗಳನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವರ್ಷಕ್ಕೆ 10 ಕೋಟಿ ರೂ.ಗಳನ್ನು ಖರ್ಚು ಮಾಡಿ ಈ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರಿಂದ ಗ್ರಾಮೀಣ ಭಾಗಕ್ಕೆ ಇ-ಆಡಳಿತವನ್ನು ತಲುಪಿಸಲಾಗುತ್ತದೆ ಎಂದರು.
ಮಹತ್ವದ ನಿರ್ಧಾರವಾಗಿ ಖಾದಿ ಗ್ರಾಮೋದ್ಯೋಗ ಮಂಡಳಿಯಿಂದ ಪಡೆದಿದ್ದ ಸಾಲದ ಮೇಲಿನ 123.76 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲು ನಿರ್ಧರಿಸಲಾಗಿದೆ. ಗ್ರಾಮೀಣ ಕೈಗಾರಿಕೆಗಾಗಿ ಪಡೆದಿದ್ದ ಸಾಲ ತೀರಿಸಲಾಗದೆ ಬಾಕಿ ಇದ್ದ ಸಾಲದ ಮೇಲೆ ಬಡ್ಡಿ ಬೆಳೆದಿದೆ. 20 ವರ್ಷಗಳಿಂದ ಈ ಸಾಲ ತೀರಿಲ್ಲ ಬಡ್ಡಿಯೂ ಹೆಚ್ಚಾಗಿದೆ. ಹೀಗಾಗಿ ಒಂದು ಬಾರಿಗೆ ಮೂಲಧನ ಪಾವತಿ ಮಾಡುವ ಫಲಾನುಭವಿಗಳಿಗೆ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಿ ಏಕ ತಿರುವಳಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ರಾಜ್ಯ ಕರಕುಶಲ ಕರ್ಮಿಗಳ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ ಎಂದು ತಿಳಿಸಿದರು.
ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆಯಡಿ ರಾಜ್ಯದ 189 ವಿಧಾನಸಭಾ ಕ್ಷೇತ್ರಗಳ 3780 ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಎರಡು ಹಂತದ ಯೋಜನೆ ಯಶಸ್ವಿಯಾಗಿದ್ದು, ಪ್ರತಿ ಕ್ಷೇತ್ರದಲ್ಲಿ ತಲಾ 20 ಕಿ.ಮೀ., ಪರಿಶಿಷ್ಠರು ಹೆಚ್ಚಿರುವ ಕ್ಷೇತ್ರಗಳಲ್ಲಿ ಹೆಚ್ಚುವರಿಯಾಗಿ 8 ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಒಟ್ಟಾರೆ 2079 ಕೋಟಿ ರೂ ವೆಚ್ಚದಲ್ಲಿ ನಮ್ಮ ರಸ್ತೆ ಯೋಜನೆ ಜಾರಿಗೆ ಬರಲಿದೆ ಎಂದರು.
ಪಂಚಾಯಿತ್ ಸಂಸ್ಥೆಗಳಲ್ಲಿ ಖಾಲಿಯಿರುವ ಸಹಾಯಕಇಂಜಿನಿಯರ್ ಮತ್ತುಕಿರಿಯ ಇಂಜಿನಿಯರ್‍ಗಳ ವೃಂದ ನೇಮಕಾತಿಗೆ ಸಚಿವ ಸಂಪುಟಅನುಮೋದನೆ ನೀಡಿದ್ದು, ಈ ಯೋಜನೆಯನ್ವಯಇನ್ನು ಮುಂದೆ ಇಲಾಖೆಗಳಲ್ಲಿ ಖಾಲಿಯಿರುವ ಇಂಜಿನಿಯರ್‍ಗಳನ್ನು ನೇರ ನೇಮಕಾತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಬಿಬಿಎಂಪಿಯಲ್ಲಿ ಐಪಿಪಿ ಯೋಜನೆ-8ರಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು, ಖಾಯಂ ಆಗಿ ವಿಲೀನಾತಿಗೊಂಡಿರುವ 40 ಮಂದಿ ಶುಶ್ರೂಷಕಿಯರಿಗೆ 2002ರ ಡಿ.12ರಿಂದ ಜಾರಿಗೆ ಬರುವಂತೆ ಪರಿಷ್ಕøತ ವೇತನ ಶ್ರೇಣಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಮಂಗಳೂರು ವಿಶೇಷ ಆರ್ಥಿಕ ವಲಯ ಯೋಜನೆಯಿಂದ ಸಂತ್ರಸ್ತರಾದ ಕುಟುಂಬಗಳಿಗೆ ಮಂಜೂರು ಮಾಡಿರುವ ಪುನರ್ ನಿರ್ಮಾಣ ಮತ್ತು ಪುನರ್ವಸತಿ ಸೌಲಭ್ಯಗಳ ಪ್ಯಾಕೇಜ್‍ನಲ್ಲಿ 177.54 ಎಕರೆಗೆ ಮುದ್ರಾಂಕ ಶುಲ್ಕಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಸರಕಾರಿ ಆದೇಶಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಬಿಬಿಎಂಪಿ ನಗರೋತ್ಥಾನ ಯೋಜನೆಯಡಿಯಲ್ಲಿ ಒಂದು ಸಾವಿರ ಕೋಟಿ ರೂ.ಗಳನ್ನು 417 ಕಾಮಗಾರಿಗಳಿಗೆ ಬಿಡುಗಡೆ ಮಾಡಲು ಅನುಮತಿ ನೀಡಲಾಗಿದೆ. ಅಧ್ಯಯನ ವಿದ್ಯಾಟ್ರಸ್ಟ್‍ಗೆ ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಮಲ್ಲತ್ತಹಳ್ಳಿ ಗ್ರಾಮದ ಸರ್ವೇ ನಂ.42ರಲ್ಲಿ ಮಂಜೂರಾಗಿದ್ದ ಎರಡು ಎಕರೆ ಭೂಮಿಯಲ್ಲಿ 20 ಗುಂmõÉ ಜಮೀನನ್ನು ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಸೋಮತ್ತನಹಳ್ಳಿ ಗ್ರಾಮದ ಸರ್ವೇ ನಂ.43 ಹಾಗೂ ದೇವನಾಯಕನಹಳ್ಳಿ ಗ್ರಾಮದ ಸರ್ವೇ ನಂ.47ರಲ್ಲಿ 84.38 ಎಕರೆ ಜಮೀನನ್ನು ಭರತೀಯ ನೌಕಾಪಡೆಗೆ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಜಯಚಂದ್ರ ತಿಳಿಸಿದರು.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿರುವ ಕರ್ನಾಟಕ ಕೋ-ಆಪರೇಟಿವ್ mõÉಕ್ಸ್mõÉೈಲ್ ಮಿಲ್ಸ್ ಲಿಮಿmõÉಡ್‍ಗೆ ಆಧುನೀಕರಣ ಮತ್ತು ತಂತ್ರಜ್ಞಾನ ಉನ್ನತೀಕರಣಕ್ಕಾಗಿ ಸರಕಾರಿ ಷೇರು ಬಂಡವಾಳ ಮತ್ತು ಸಾಲವಾಗಿ ಒಟ್ಟು 7.32 ಕೋಟಿ ರೂ.ಗಳನ್ನು ಮಂಜೂರು ಮಾಡಲು ಎನ್‍ಸಿಡಿಸಿಗೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
`ಸಿ’ ವರ್ಗದ ಗಣಿಗಳಲ್ಲಿರುವ ಅದಿರನ್ನು ಅಂದಾಜಿಸುವ ಕೆಲಸವನ್ನು ಮಿನರಲ್ ಎಕ್ಸ್‍ಪೆÇ್ಲೀರೇಷನ್ ಕಾಪೆರ್Çೀರೇಷನ್ ಆಫ್ ಇಂಡಿಯಾ ಸಂಸ್ಥೆಗೆ ವಹಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಆರು ಗಣಿಗಳನ್ನು ವಹಿಸಲಾಗಿತ್ತು. ಇದೀಗ 9 ಗಣಿಗಳನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ 90 ಮೀಟರ್ ಎತ್ತರ ತಲುಪಬಲ್ಲ ಅತ್ಯಾಧುನಿಕ ಏರಿಯಲ್ ಲ್ಯಾಡರ್ ಫ್ಲಾmõï ಫಾರ್ಮ್‍ನ್ನು ಖರೀದಿಸಲು ಹೆಚ್ಚುವರಿಯಾಗಿ 18.28 ಕೋಟಿ ರೂ.ಗಳ ಅನುದಾನ ಒದಗಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಮಾರ್ಕಂಡೇಯ ಸಹಕಾರಿ ಸಕ್ಕರೆ ಕಾರ್ಖಾನೆಯವರು ಬೆಳಗಾವಿ ಜಿಲ್ಲೆಯ ಕಾಕತಿ ಗ್ರಾಮದಲ್ಲಿ ಹೊಸದಾಗಿ ಸ್ಥಾಪಿಸಲಿರುವ ಸಕ್ಕರೆ ಕಾರ್ಖಾನೆಗೆ 41 ಗ್ರಾಮಗಳನ್ನು ಹಾಗೂ ಬೀದರ್ ಜಿಲ್ಲೆಯ ಬಾಲಕೇಶ್ವರ ಸಕ್ಕರೆ ಕಾರ್ಖಾನೆಗೆ 12 ಗ್ರಾಮಗಳನ್ನು ಕಬ್ಬು ಮೀಸಲು ಕ್ಷೇತ್ರವನ್ನಾಗಿ ಹಂಚಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಜಯಚಂದ್ರ ಹೇಳಿದರು.
ಬೆಂಗಳೂರು ಪೂರ್ವ ವಲಯದಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ದುರ್ನಡತೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ಶಿಸ್ತು ಕ್ರಮ ಜರುಗಿಸುವಂತೆ ಸಲ್ಲಿಸಿರುವ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದು ಅವರು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲು ಅನುಮತಿ, ಬೆಂಗಳೂರು ಉತ್ತರ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿಂದಿನ ಉಪ ನಿರ್ದೇಶಕ ಎಸ್.ಕೆ.ಚನ್ನಬಸಪ್ಪ ವಿರುದ್ಧ ಉಪ ಲೋಕಾಯುಕ್ತ ಮಾಡಿರುವ ಶಿಫಾರಸ್ಸನ್ನು ಒಪ್ಪದಿರಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ತುಮಕೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಅಭಿವೃದ್ಧಿಗಾಗಿ ಮಂಜೂರು ಮಾಡುವ ಜಮೀನಿನಲ್ಲಿ ನೆಡುತೋಪು ಬೆಳೆಸಲು 10 ಕೋಟಿ ರೂ.ಗಳ ಅನುದಾನವನ್ನು ಕೇಂದ್ರ ಸರಕಾರದ ಅರಣ್ಯ ಇಲಾಖೆಗೆ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
ಪ್ರಸರಣ ಮಾರ್ಗ ರಚನೆಯ ರಹದಾರಿ ಪಡೆಯಲು ಭೂ ಮಾಲಕರಿಂದ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಪರಿಹಾರದ ಮೊತ್ತ ನಿಗದಿಪಡಿಸುವ ನೀತಿಗೆ ಒಪ್ಪಿಗೆ, ವಾಣಿಜ್ಯ ತೆರಿಗೆ ಅಧಿಕಾರಿ ಎಚ್.ಪಿ.ವೆಂಕmõÉೀಶ್ ತಮ್ಮ ಅಧಿಕಾರವಧಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿ ಸಿಕ್ಕಿ ಬಿದ್ದಿದ್ದರು. ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅವರು ಹೇಳಿದರು.
ಧಾರವಾಡ ಜಿಲ್ಲಾ ಆಸ್ಪತ್ರೆಯ ದುರಸ್ಥಿ, ನವೀಕರಣ ಮತ್ತು ಹೆಚ್ಚುವರಿ ಕಾಮಗಾರಿಗಳನ್ನು 9.98 ಕೋಟಿ ರೂ.ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬಾಗಲಕೋmõÉ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಎಸ್. ಸತ್ತಿಗೇರಿಯನ್ನು ಚೆಕ್‍ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಗುಲ್ಬರ್ಗದಲ್ಲಿ ನ.27ರಂದು ಸಚಿವ ಸಂಪುಟ ಸಭೆ ನಡೆಸಿ, ಆ ಭಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಮಾಡಲು ತೀರ್ಮಾನಿಸಲಾಗಿದೆ ಜಯಚಂದ್ರ ಹೇಳಿದರು.

loading...

LEAVE A REPLY

Please enter your comment!
Please enter your name here