ಮಜ್ಜಗಿ ಬಂಧನಕ್ಕೆ ಒತ್ತಾಯ

0
19
loading...

ಬೆಳಗಾವಿ:22 ಹೆಸ್ಕಾಂ ಅಧಿಕಾರಿ ಟಿ.ಬಿ.ಮಜ್ಜಿಗಿ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅವರಿಂದ ಶೋಷಣೆಗೊಳಗಾದ ಮಹಿಳೆ ಶನಿವಾರ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅತ್ಯಾಚಾರಕ್ಕೆ ಯತ್ನ ಹಾಗೂ ಲೈಂಗಿಕ ಕಿರುಕುಳ ಮಾಡಿರುವ ಕುರಿತು ಪ್ರಕರಣ ದಾಖಲಿಸಿ ನಾಲ್ಕು ದಿನಗಾಳಾದರು ಪೊಲೀಸರು ಅವರು ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅವರಿಗೆ ಆಸ್ಪತ್ರೆಯಲ್ಲಿ ಐಷಾರಮಿ ವ್ಯವಸ್ಥೆ ಕಲ್ಪಿಸಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವನಿಗೆ ಈ ರೀತಿಯಾಗಿ ಪೊಲೀಸರು ವ್ಯವಸ್ಥೆ ಕಲ್ಪಿಸುತ್ತಿರುವುದು ಖಂಡನೀಯ. ತಕ್ಷಣ ಅವರನ್ನು ಬಂಧಿಸಿ ಜೈಲಿಗೆ ಅಟ್ಟಬೇಕೆಂದು ಮಹಿಳೆ ಸಚಿವರಲ್ಲಿ ವಿನಂತಿಸಿದ್ದಾರೆ.
ಮುಂದುವರೆದ ಮಜ್ಜಗಿ ಐಷ್ಯಾರಾಮಿ : ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಯತ್ನ ಹಾಗೂ ಮಾನಂಭ ಆರೋಪ ಎದುರಿಸುತ್ತಿರುವ ಹೆಸ್ಕಾಂ ಅಧಿಕಾರಿ ಟಿ.ಬಿ.ಮಜ್ಜಿಗಿಗೆ ಶನಿವಾರದಂದು ಕೂಡಾ ಜಿಲ್ಲಾಸ್ಪತ್ರೆಯಲ್ಲಿ ಐಷ್ಯಾರಾಮಿ ಚಿಕಿತ್ಸೆ ಮುಂದುವರೆದಿದೆ.
ಮಹಿಳೆಯ ಮೇಲೆ ದೌರ್ಜನ್ಯವೆಸಗಿದ ಆರೋಪಿಗೆ ಪೊಲೀಸ ಇಲಾಖೆ ಈ ರೀತಿಯಾಗಿ ರಕ್ಷಣೆ ನೀಡುತ್ತಿರುವದು ಸರಿಯಲ್ಲ. ಕುಂಟು ನೆಪ ಹೇಳಿ ಆಸ್ಪತ್ರೆ ಸೇರಿದ ಮಜ್ಜಿಗಿಯನ್ನು ತಕ್ಷಣ ಬಂಧಿಸಿ ಜೈಲಿಗೆ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

loading...

LEAVE A REPLY

Please enter your comment!
Please enter your name here