ವಕೀಲರ ಪ್ರತಿಭಟನೆ : ಗೃಹ ಸಚಿವರ ವಾಸ್ತವ್ಯ ಬದಲು

0
17
loading...

ಬೆಳಗಾವಿ,21: ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ)ಯನ್ನು ನಗರದಲ್ಲಿ ಸ್ಥಾಪಿಸುವಂತೆ ಆಗ್ರಹಿಸುತ್ತಿರುವ ವಕೀಲರ ಪ್ರತಿಭÀಟನೆ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಸರ್ಕಾರಿ ಅತಿಥಿ ಗೃಹದಲ್ಲಿ ಶುಕ್ರವಾರದ ವಾಸ್ತವ್ಯವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಬದಲಾಯಿಸಿದ್ದಾರೆ.
ಶುಕ್ರವಾರ ಸಂಜೆ ಬೆಳಗಾವಿಗೆ ಆಗಮಿಸಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವ ಬಗ್ಗೆ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಗುರುವಾರ ರಾಜ್ಯಪಾಲರ ಭೇಟಿಗೆ ಸರ್ಕಾರಿ ಅತಿಥಿ ಗೃಹದಲ್ಲಿ ಅವಕಾಶ ನೀಡದೇ ಇದ್ದರಿಂದ ವಕೀಲರು ಪೆÇಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದಾಗಿ ಗೃಹ ಸಚಿವರ ವಾಸ್ತವ್ಯವನ್ನು ಬದಲಾಯಿಸಲಾಗಿದೆ ಎಂದು ತಿಳಿದುಬಂದಿದೆ.

loading...

LEAVE A REPLY

Please enter your comment!
Please enter your name here