ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಪ್ರತಿಭಟನೆ

0
13
loading...

ಬೆಳಗಾವಿ,05: ಶಿವಮೊಗ್ಗದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಕಾರ್ಯಕರ್ತರು
ನಗರದ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ನಗರದ ಲಿಂಗರಾಜ ಕಾಲೇಜಿನಿಂದ ಚನ್ನಮ್ಮ  ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ
ಆಕ್ರೋಶ ವ್ಯಕ್ತ ಪಡಿಸಿದರು. ಅಲ್ಲದೇ ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸುವ ಮೂಲಕ ರಸ್ತೆ ತಡೆ ಕೂಡ ನಡೆಸಿದರು.
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಇದನ್ನು ತಡೆಯವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ವಿಬ್‍ಗಯಾರ್ ಶಾಲೆ, ಕೇಂಬ್ರಿಜ್ಡ್ ಶಾಲೆ, ತೀರ್ಥನಹಳ್ಳಿಯ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸೀ, ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಮತ್ತು ಅದರಲ್ಲೂ ಗೃಹ ಸÀಚಿವರು ಮಹಿಳೆಯ ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಅಗತ್ಯ ಕ್ರಮಕೈಗೊಳ್ಳಬೇಕು. ಅತ್ಯಾಚಾರ ಕಾನೂನಿನಲ್ಲಿ ತಿದ್ದುಪಡಿ ತಂದು ಪ್ರಭಲ ಕಾನೂನು ರೂಪಿಸಬೇಕೆಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಎಬಿವಿಪಿಯ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

loading...

LEAVE A REPLY

Please enter your comment!
Please enter your name here