`ಸ್ವಾಮಿ ವಿವೇಕಾನಂದರ ತತ್ವಗಳು ಸಾರ್ವಕಾಲಿಕ’

0
143
loading...

ವಿಜಯಪುರ,ಜ.6: ಸ್ವಾಮಿ ವಿವೇಕಾನಂದರ ತತ್ವಗಳು ಸಾರ್ವಕಾಲಿಕ. ಅವರೊಬ್ಬ ಶ್ರೇಷ್ಠ ವಾಗ್ಮಿ, ಚಿಂತಕ, ಶ್ರೇಷ್ಠ ತತ್ವಜ್ಞಾನಿಯಾಗಿದ್ದರು. ಅವರದು ಅದ್ಭುತ ವ್ಯಕ್ತಿತ್ವ ಎಂದು ಮಹಿಳಾ ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಾಥರಾವ ಅವರು ಹೇಳಿದರು.
ಮಹಿಳಾ ವಿವಿಯ ಆದರ್ಶ ಸ್ತ್ರೀತ್ವ ಕೇಂದ್ರ ಮತ್ತು ಸ್ವಾಮಿ ವಿವೇಕಾನಂದ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಾಲ್ಕು ದಿನಗಳ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕ ವೃತ್ತಿ ಪವಿತ್ರವಾದದ್ದು ನಿಮ್ಮ ಜೀವನವನ್ನು ಇಷ್ಟಕ್ಕೆ ಸೀಮಿತಗೊಳಿಸದೇ ಭವಿಷ್ಯದಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಬೇಕೆಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಎ.ಜಿ.ಹೇಮಂತಕುಮಾರ್ ಅವರು “ಮಾನವನಲ್ಲಿ ಅಂತರ್ಗತವಾಗಿರುವ ದೈವೀ ಪರಿಪೂರ್ಣತೆಯನ್ನು ಹೊರಗೆ ತರುವುದೇ ಶಿಕ್ಷಣ” ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ವಿ. ವಿ. ಮಳಗಿ, ಅವರು ಪ್ರಾಸ್ತವಿಕವಾಗಿ ಮಾತನಾಡಿ, ಎರಡೂ ಕೇಂದ್ರಗಳ ಉದ್ದೇಶಗಳನ್ನು ಹಾಗೂ ಕಾರ್ಯಗಳನ್ನು ವಿವರಿಸಿದರು.
ಆದರ್ಶ ಸ್ತ್ರೀತ್ವ ಕೇಂದ್ರದ ಸಂಯೋಜಕರಾದ ಡಾ. ಜಿ.ಸೌಭಾಗ್ಯ ವಂದಿಸಿದರು. ಕುಮಾರಿ. ಗಂಗಾ ಹಿರೇಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಅಧ್ಯಯನ ವಿಭಾಗದ ಎಲ್ಲ ಸಹ ಹಾಗೂ ಸಹಾಯಕ ಪ್ರಾಧ್ಯಾಪಕರು ಮತ್ತು ವಿವಿಧ ಶಿಕ್ಷಣ ಮಹಾವಿದ್ಯಾಲಯಗಳ ಪ್ರಾಚಾರ್ಯರು ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here