ರೈತರ ಸಾಲ ಮನ್ನಾ ಮಾಡಲು ಆಗ್ರಹ

0
19
loading...

 

ಖಾನಾಪುರ: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವರುಣ ಮುನಿಸಿಕೊಂಡಿದ್ದು ರೈತರ ಜೀವನ ಅಸ್ತವ್ಯಸ್ತವಾಗಿದೆ. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳಿಂದ ಬರಬೇಕಾದ ಬಾಕಿ ಹಣ ಸಮರ್ಪಕವಾಗಿ ಪೂರೈಕೆಯಾಗಿಲ್ಲ. ಇದರಿಂದ ಸಾಲದಲ್ಲಿರುವ ರೈತರು ಸಾಲವನ್ನು ಮರು ಪಾವತಿ ಮಾಡುವ ಸ್ಥಿತಿಯಲ್ಲಿಲ್ಲ. ಕಾರಣ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ತಾಲೂಕಿನ ಗಂದಿಗವಾಡದ ರೈತರಾದ ಭೀಮಪ್ಪ ಬೋಕಡೆಕರ, ಮಹಾಂತೇಶ ಪಾಟೀಲ, ಎಂ ಎಂ ರಾಜೀಬಾಯಿ, ಬಾಬು ಮೂಲಿಮನಿ ಹಾಗೂ ಇತರರು ಆಗ್ರಹಿಸಿದ್ದಾರೆ. ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗದಿದ್ದರೆ ಭವಿಷ್ಯದಲ್ಲಿ ಸಂಭವಿಸುವ ರೈತರ ಆತ್ಮ ಹತ್ಯೆಗಳಿಗೆ ಸರ್ಕಾರಗಳೇ ಹೊಣೆ ಎಂದು ಅವರು ಎಚ್ಚರಿಸಿದ್ದಾರೆ.

loading...

LEAVE A REPLY

Please enter your comment!
Please enter your name here