ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಇಂದು

0
21
loading...

ಬಾಗಲಕೋಟ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಆರ್.ಪಾಟೀಲ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎಚ್.ವಾಯ್.ಮೇಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಉಮಾಶ್ರೀ, ಸಂಸದ ಪಿ.ಸಿ.ಗದ್ದಿಗೌಡರ, ಜಿ.ಪಂ ಅಧ್ಯಕ್ಷ ಬಸವಂತಪ್ಪ ಮೇಟಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರ ಗಣ್ಯಮಾನ್ಯರು ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ, ಜಿಲ್ಲಾ ಮಟ್ಟದ ವಿಜೇತರಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ.

loading...

LEAVE A REPLY

Please enter your comment!
Please enter your name here