ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆಗೆ ಸಾಲ-ಸೌಲಭ್ಯ

1
1343
loading...

ವಿಜಯಪುರ: ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಪಶು ಭಾಗ್ಯ ಯೋಜನೆಯಡಿ ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ-ಹಾಗೂ ಇಲಾಖೆ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆದು ಹೈನುಗಾರಿಕೆ ಮಾಡುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೆ.33 ರಷ್ಟು ಬ್ಯಾಕ್ ಎಂಡ್ ಸಹಾಯಧನ ಇಲಾಖೆ ವತಿಯಿಂದ ನೀಡಲಾಗುವುದು.
ಆಸಕ್ತ ರೈತ ಫಲಾನುಭವಿಗಳು ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ ಇವರನ್ನು ಸಂಪರ್ಕಿಸಲು ಪಶುಪಾಲನೆ ಮತ್ತು ಪಶುವೈದ್ಯ ಸೇವೆಗಳ ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

loading...

1 COMMENT

LEAVE A REPLY

Please enter your comment!
Please enter your name here