ಜಿಲ್ಲಾಡಳಿತ ಭವನದಲ್ಲಿ ಗಾಂಧಿ ಮತ್ತು ಶಾಸ್ತ್ರೀ ಜಯಂತಿ

0
22
loading...

ಬಾಗಲಕೋಟ : ಬಾಗಲಕೋಟ ಜಿಲ್ಲಾಡಳಿತ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿಂದು ಗಾಂಧೀ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ, ಜಿ.ಪಂ ಸಿಇಓ ಎಂ.ಜಿ.ಹಿರೇಮಠ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತ ಹಾಗೂ ಹಿರಿಯ ಅಧಿಕಾರಿಗಳು ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದ ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಎಂಬ ವಿಶೇಷ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ವಿವಿಧ ಧರ್ಮದ ಗುರುಗಳಾದ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಸಿ.ಜಾನಸನ್ ಪಾಲ್ ಡೇನಿಯಲ್ ಬೈಬಲ್ ಹಾಗೂ ಸಲೀಂ ಖಲಾಸಿ ಅವರು ಕುರಾನ್ ಕುರಿತು ಉಪದೇಶ ನೀಡಿದರು. ಹಾಗೂ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರೊ.ಸಿದ್ದರಾಮ ಮಠಪತಿ ಹಾಗೂ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿಲಾಯಿತು.
ನಂತರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಹಮ್ಮಿಕೊಂಡ 50 ಹಳ್ಳಿಗಳಲ್ಲಿ ಗಾಂಧಿ ಕನಸು ಕರ್ನಾಟಕದಲ್ಲಿ ನನಸು ಗ್ರಾಮೀಣಾಭಿವೃದ್ದಿ ಕಾರ್ಯಕ್ರಮಗಳ ವಿಶೇವ ಕಲಾಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಹಾಗೂ ಜಿ.ಪಂ ಸಿಇಓ ಎಂ.ಜಿ.ಹಿರೇಮಠ ವಿನ್ಯಾಸಗೊಂಡ ಕ್ಷೇತ್ರ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ವಿಶೇಷ ಕಲಾಜಾಥಾ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರು ಗ್ರಾಮ ಸ್ವರಾಜ್ಯ ಗಾಂಧೀಜಿಯವರ ಅಚ್ಚುಮೆಚ್ಚಿನ ಕಾರ್ಯಕ್ರಮವಾಗಿದ್ದು, ರಾಜ್ಯ ಈ ವಿಷಯದಲ್ಲಿ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ದಿ ಗಾಂಧೀಜಿಯವರ ಚಿಂತನೆಯಾಗಿತ್ತು. ಗಾಂಧೀಜಿಯವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 50 ಹಳ್ಳಿಗಳಲ್ಲಿ ವಿಶೇಷ ಕಲಾಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶ್ಲಾಘನೀಯವೆಂದರು.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಚಿಂತನೆ ಸಂದೇಶಗಳನ್ನು ಯುವಜನತೆಗೆ ಪರಿಚಿಯಿಸಲು ವಾರ್ತಾ ಇಲಾಖೆ ಹಮ್ಮಿಕೊಂಡ ಕರ್ನಾಟಕದಲ್ಲಿ ಗಾಂಧೀಜಿಯವರು ಭೇಟಿ ನೀಡಿದ ಸಂದರ್ಭಗಳ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವೀಕ್ಷಿಸಿದರು.

loading...

LEAVE A REPLY

Please enter your comment!
Please enter your name here