ವಾಕ್ ಮತ್ತು ಶ್ರವಣ ದೋಷವುಳ್ಳವರ ದಿನಾಚರಣೆ

0
27
loading...

ವಿಜಯಪುರ : ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಡಿಪಿ) ವತಿಯಿಂದ ವಿಶ್ವ ವಾಕ್ ಮತ್ತು ಶ್ರವಣ ದೋಷವುಳ್ಳವರ ದಿನಾಚರಣೆಯ ಅಂಗವಾಗಿ ಇದೇ ದಿನಾಂಕ 6 ರಿಂದ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಪಿಡಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ವಿಲಿಯಂ ಬೋರ್ನಿಯೋ ಹೇಳಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂರು ದಿನಗಳ ಕಾರ್ಯಕ್ರಮಗಳ ವಿವರಣೆ ನೀಡಿದರು.
ವಾಕ್ ಮತ್ತು ಶ್ರವಣ ದೋಷವುಳ್ಳವರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಿ.6 ರಂದು ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ವಾಕ್ ಮತ್ತು ಶ್ರವಣ ನೂನ್ಯತೆಯ ಕುರಿತು ತಿಳಿವಳಿಕಾ ಕಾರ್ಯಕ್ರಮ ನಡೆಯಲಿದೆ. 7ರಂದು ಗೋಳಗುಮ್ಮಟದ ಉದ್ಯಾನವನದಲ್ಲಿ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಕಲಾ ಮೇಳವನ್ನು ಆಯೋಜಿಸಲಾಗಿದೆ. 8ರಂದು ನಗರದಲ್ಲಿ ಜನಜಾಗೃತಿ ಜಾಥಾ ಹಾಗೂ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಉಮೇಶ ಕೋಳಕೂರ ಕಾರ್ಯಕ್ರಮ ಉದ್ಘಾಟಿಸುವರು.ಬಿಎಲ್‍ಡಿಇ ವಿಶ್ವವಿದ್ಯಾಲಯದ ಉಪಕುಲಪತಿ ಬಿ.ಜಿ.ಮೂಲಿಮನಿ, ಹಾಗೂ ಪ್ರಾಧ್ಯಾಪಕ ಕುಶಾಲ ಕೆ.ದಾಸ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಎಪಿಡಿ ಸಂಸ್ಥೆ ಗುರುಪ್ರಸಾದ ಎಸ್. ಅವರು ಅಧ್ಯಕ್ಷತೆ ವಹಿಸುವರು. 9ರಂದು ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಅಂಗವಿಕಲ ಮಕ್ಕಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ವಾಕ್ ಮತ್ತು ಶ್ರವಣ ದೋಷವುಳ್ಳವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಸಾಮಾನ್ಯ ಹಾಗೂ ಅಂಗವಿಕಲ ಮಕ್ಕಳಲ್ಲಿ ಉತ್ತಮ ಬಾಂಧವ್ಯ ವೃದ್ಧಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಒಂದು ಪೂರಕವಾದ ವೇದಿಕೆಯಾಗಲಿದೆ. ಎಪಿಡಿ ಸಂಸ್ಥೆಯ ಸಹಾಯಕ ನಿರ್ದೇಶಕ ಗುರುಪ್ರಸಾದ ಸೇರಿದಂತೆ ವಿವಿಧ ಸಂಪನ್ಮೂಲ ವ್ಯಕ್ತಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ವಾಕ್ ಮತ್ತು ಶ್ರವಣದೋಷವುಳ್ಳವರು ಸರಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಸೌಲಭ್ಯದ ಬಗ್ಗೆ ಅರಿವು ಮೂಡಿಸುವುದು ಸಹ ಸಮಾರಂಭದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.
ಸಂಜ್ಞೆ ಭಾಷೆಯಲ್ಲಿಯೇ ತಮ್ಮ ಅನುಭವ ಹಂಚಿಕೊಂಡ ಸೌಮ್ಯಾ ಅವರು, ವಾಕ್ ಮತ್ತು ಶ್ರವಣ ದೋಷವುಳ್ಳವರ ಶ್ರೇಯೋಭಿವೃದ್ಧಿಗಾಗಿ ಎಪಿಡಿ ಸಂಸ್ಥೆ ಸದಾ ಶ್ರಮಿಸುತ್ತಿದೆ. ಸಂಜ್ಞೆ ಭಾಷೆಯ ಬಗ್ಗೆ ತರಬೇತಿ, ವಿಶೇಷ ಬೇಸಿಗೆ ಶಿಬಿರ, ವಾಕ್ ಮತ್ತು ಶ್ರವಣ ದೋಷವುಳ್ಳ ಮಕ್ಕಳ ಪಾಲಕರಿಗಾಗಿ ವಿಶೇಷ ತರಬೇತಿ ಶಿಬಿರ ಆಯೋಜಿಸಿದೆ. ಈ ಶಿಬಿರದಲ್ಲಿ ವಾಕ್ ಮತ್ತು ಶ್ರವಣ ದೋಷವುಳ್ಳವರು ಭಾಗವಹಿಸಬೇಕು ಎಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಉಮೇಶ ಗಡೇದ, ಸೌಮ್ಯ, ಗಂಗಾಧರ, ಸಂಪನ್ಮೂಲ ವ್ಯಕ್ತಿ ರವಿ, ರಮೇಶ ಮಾನೆ ಇತರರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here