ಸಚಿವ ಸಂಪುಟದಲ್ಲಿ ಶಾಸಕ ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು : ಕಮತಗಿ

0
17
loading...

ಆಲಮಟ್ಟಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅವರಿಗೆ ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಎಮ್.ಆರ್.ಕಮತಗಿ ಹೇಳಿದರು.
ಅವರು ಗುರುವಾರ ಖಾಸಗಿ ಅತಿಥಿಗೃಹದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿವಾನಂದ ಪಾಟೀಲ ಅವರು ಇಡೀ ರಾಜ್ಯವೇ ಮೆಚ್ಚುವಂತೆ ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ವಿಧಾನಸಭೆಯಲ್ಲಿ ಅತೀ ಹೆಚ್ಚು ಪ್ರಶ್ನೆ ಕೇಳಿದ ಶಾಸಕರೆನಿಸಿಕೊಂಡಿರುವ ಅವರು ವಿಜಯಪುರ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ ಹಲವಾರು ರೈತರ ಯೋಜನೆಗಳನ್ನು ಹಾಕಿಕೊಂಡು ಸಕಾಲಕ್ಕೆ ರೈತರ ನೆರವಿಗೆ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ಸಾಲ ವಿತರಿಸುವಲ್ಲಿ ವಿಶೇಷ ಮುತುವರ್ಜಿವಹಿಸಿದ್ದಾರೆ, ಯಾವುದೇ ಪ್ರಚಾರದ ಬೆನ್ನುಹತ್ತದೇ ಮತಕ್ಷೇತ್ರದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಶೇಷ ಕಾಳಜಿವಹಿಸಿದ್ದಾರೆ ಅಲ್ಲದೇ ಹಲವಾರು ಜನಪರ ಯೋಜನೆಗಳ ಅನುಷ್ಠಾನಕ್ಕೆ ನಿರಂತರ ಹೋರಾಟ ಮಾಡುತ್ತಾರೆ ಆದ್ದರಿಂದ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಯುವಮುಖಂಡ ಸಿದ್ದು ಗೊಳಸಂಗಿ ಹಾಗೂ ಗ್ರಾ.ಪಂ.ಸದಸ್ಯ ಎಚ್.ಎಫ್.ಕಟ್ಟಿಮನಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here