27ರಂದು ಹುಣ್ಣಿಮೆ ಕವಿಗೋಷ್ಠಿ

0
9
loading...

 

ಬೆಳಗಾವಿ17: ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಅ.27ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ `ಹುಣ್ಣಿಮೆ ಕವಿಗೋಷ್ಠಿ’ಯನ್ನು ಆಯೋಜಿಸಲಾಗಿದೆ.
ಸಮಾರಂಭವನ್ನು ಹಿರಿಯ ಸಾಹಿತಿ ರಂಜನಾ ನಾಯಕ್ ಉದ್ಘಾಟಿಸಲಿದ್ದಾರೆ. ಸುನಂದಾ ಎಮ್ಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಗುರುದೇವಿ ಹುಲೆಪ್ಪನವರಮಠ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ. ಕರ್ನಾಟಕ ಲೇಖಕಿಯರ ಸಂಗದ ಅಧ್ಯಕ್ಷೆ ಆಶಾ ಕಡಪಟ್ಟಿಯವರು ಸ್ವಾಗತಿಸುವರು.
ಕಾರ್ಯಕ್ರಮದಲ್ಲಿ 23 ಮಂದಿ ಕವಿಯತ್ರಿಯರಿಗೆ ಅವಕಾಶ ನೀಡಲಾಗಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

loading...

LEAVE A REPLY

Please enter your comment!
Please enter your name here