ನಾಯಕತ್ವದ ಗುಣ, ಸ್ವಾಭಿಮಾನಿ ಜೀವನ ನಡೆಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾರ್ಗದರ್ಶನ

0
18
loading...

23 sdp 1ಸಿದ್ದಾಪುರ,23: ನಾಯಕತ್ವದ ಗುಣ, ಸ್ವಾಭಿಮಾನಿ ಜೀವನ ನಡೆಸಲು ಹಾಗೂ ಗ್ರಾಮದ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮವಾಗಿ ಮಾರ್ಗದರ್ಶನ ನೀಡುತ್ತಿದ್ದು ಇದರ ಪ್ರಯೋಜನವನ್ನು ಎಲ್ಲರೂ ಸರಿಯಾಗಿ ಪಡೆದುಕೊಳ್ಳಬೇಕು ಎಂದು ಸಿದ್ದಾಪುರ ಪಿ.ಎಸ್.ಐ. ಶಿವಕುಮಾರ ಬಿ. ಹೇಳಿದರು.
ಅವರು ತಾಲೂಕಿನ ಕವಲಕೊಪ್ಪ ಸಿದ್ಧಿವಿನಾಯಕ ದೇವಾಲಯದ ಸಭಾಭವನದಲ್ಲಿ ರವಿವಾರ ಸಂಘಟಿಸಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿದ್ದಾಪುರ ವಲಯದ ಬಿದ್ರಕಾನ ಹಾಗೂ ಕವಲಕೊಪ್ಪ ಒಕ್ಕೂಟದ ಪ್ರಗತಿಬಂಧು-ಸ್ವಸಹಾಯ ಸಂಘಗಳ ಪದಗ್ರಹಣ ಉದ್ಘಾಟಿಸಿ ಮಾತನಾಡಿದರು.
ಗ್ರಾಮಾಭಿವೃದ್ಧಿ ಯೋಜನೆ ನಡೆಸುವ ಮದ್ಯವರ್ಜನ ಶಿಬಿರ ಸಮಾಜದ ಸುಸ್ಥಿತಿಗೆ ಕಾರಣವಾಗಿದೆ ಎಂದರು.
ಶಿಕ್ಷಣ ಪ್ರಸಾರಕ ಸಮಿತಿ ಕಾರ್ಯದರ್ಶಿ ಸಿ.ಆರ್.ಹೆಗಡೆ ಕವಲಕೊಪ್ಪ ಮಾತನಾಡಿ ಗ್ರಾಮಿಣ ಪ್ರದೇಶದ ಜನತೆಯ ಅವಶ್ಯಕತೆಗನುಗುಣವಾಗಿ ಸರ್ಕಾರ ಕಡೆಗಣಿಸುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಶಸ್ವಿಯಾಗಿ ಜನರಿಗೆ ತಲುಪಿಸಿ ಕೃಷಿಕರಿಗೆ ಸಹಕಾರ ನೀಡುತ್ತಿದೆ. ನಮ್ಮ ಬದುಕಿಗೆ ಯಾವುದು ಅವಶ್ಯಕವೋ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬದುಕು ಬಂಧುತ್ವವನ್ನು ಬೆಳೆಸುತ್ತದೆ. ಅದಕ್ಕೆ ಸಂಘಟನೆ ಅತ್ಯವಶ್ಯ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ ಪೂಜಾರಿ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಕಾರ್ಯ ಪಾರದರ್ಶಕವಾಗಿ ನಡೆಯುತ್ತಿದೆ. ಕೃಷಿಗೆ ಪೂರಕವಾದ ಯೋಜನೆಗಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರತಿಯೊಂದು ಸದಸ್ಯರ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಂಡು ನಮ್ಮ ಪರಿಸರವನ್ನು ಉತ್ತಮವಾಗಿಟ್ಟುಕೊಳ್ಳಬೇಕೆಂದರು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ ಹಾರ್ಸಿಮನೆ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನತೆ ಆರ್ಥಿಕವಾಗಿ ಸುಧಾರಿಸಿಕೊಳ್ಳುವುದರ ಜೊತೆಗೆ ಸಮಾಜದ ಅಭಿವೃದ್ಧಿಗೂ ಸಹಕಾರಿಯಾಗಿದೆ ಎಂದರು.
ಬಿದ್ರಕಾನ ಗ್ರಾ.ಪಂ. ಅಧ್ಯಕ್ಷೆ ಗೀತಾ ಶಿವಾನಂದ ನಾಯ್ಕ ಅಧ್ಯಕ್ಷತೆವಹಿಸಿದ್ದರು.
ತಾ.ಪಂ. ಉಪಾಧ್ಯಕ್ಷೆ ಮಂಜುಳಾ ಡಿ.ಚನ್ನಯ್ಯ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ತಿಮ್ಮಪ್ಪ ನಾಯ್ಕ, ಅನಂತ ಗೌಡ ನೂತನ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಮೂರ್ತಿ ನಾಯ್ಕ, ಮಂಜುನಾಥ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನೂತನ ಒಕ್ಕೂಟದ ಪದಾಧಿಕಾರಿಗಳಿಗೆ ನಿಕಟಪೂರ್ವ ಒಕ್ಕೂಟದ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.
ನಿರ್ಮಲಾ ಹೆಗಡೆ ಪ್ರಾರ್ಥನೆ ಹಾಡಿದರು. ಮೇಲ್ವಿಚಾರಕಿ ವನಿತಾ ಸ್ವಾಗತಿಸಿದರು. ನೇತ್ರಾವತಿ ಕಾರ್ಯಕ್ರಮ ನಿರ್ವಹಿಸಿದರು. ಕೃಷ್ಣಮೂರ್ತಿ ನಾಯ್ಕ ವಂದಿಸಿದರು.

loading...

LEAVE A REPLY

Please enter your comment!
Please enter your name here