ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

0
27
loading...

ಬಾಗಲಕೋಟ : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪ್ರಸಕ್ತ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗಾಗಿ 9 ರಇಂದ 12ನೇ ವರ್ಗದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಯ್ನು ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನಲ್ಲಿ ಆಯೋಜಿಸಲಾಗಿದ್ದು, ವೈಜ್ಞಾನಿಕ ಕಾರ್ಯಕ್ರಮ ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಗುರಿ ಹೊಂದಿದೆ. ಈ ಯೋಜನೆಯಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವೆಬ್‍ಸೈಟ್ ನಿಂದ ಅರ್ಜಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ 8 ರೊಳಗಾಗಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವುದು. ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಡಿಸೆಂಬರ 15 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲದಲ್ಲಿ ಆಯೋಜಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಯುವ ವಿಜ್ಞಾನಿಗಳು 2016ರ ಜನವರಿಯಲಿ ಜರುಗುವ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸಂಯೋಜಕರಾದ ಗಿರೀಶ ಕಡ್ಲೇವಾಡ ಮೊನಂ.9448830454, ಕಚೇರಿ ದೂಸಂ.080-26718939/59 ಹಾಗೂ ಬಾಗಲಕೋಟ ಜಿಲ್ಲಾ ಸಂಯೋಜಕರಾದ ಡಾ.ಎಸ್.ಬಿ.ಕುಂಬಾರ ಮೊನಂ.9900984401 ಇವರನ್ನು ಸಂಪರ್ಕಿಸುವಂತೆ ರಾಜ್ಯ ವಿಜ್ಞಾನ ಪರಿಷತ್ ಪ್ರಕಟಣೆ ತಿಳಿಸಿದೆ.

loading...

LEAVE A REPLY

Please enter your comment!
Please enter your name here