ವಿದ್ಯಾರ್ಥಿನಿ ಆತ್ಮಹತ್ಯೆ

0
23
loading...

apoorva patil
ಶಿರಸಿ,4: ಸೋಮವಾರವಷ್ಟೆ ಶಿರಸಿಯ ಎಂಇಎಸ್ ಶಿಕ್ಷಣ ಸಂಸ್ಥೆಯ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಮತ್ತೋರ್ವ ವಿದ್ಯಾರ್ಥಿನಿ ಸಂಸ್ಥೆಯ ಹಾಸ್ಟೇಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಎಂಇಎಸ್ ಚೈತನ್ಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಅಪೂರ್ವ ಪ್ರಕಾಶ ಪಾಟೀಲ್ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಮೂಲತಃ ಸಿದ್ದಾಪುರ ತಾಲೂಕಿನ ಕೋಲಶಿರ್ಸಿ ಸಮೀಪದ ಕುಣಜಿಯ ನಿವಾಸಿಯಾಗಿದ್ದ ಅಪೂರ್ವ ಪಾಟೀಲ್ ಚೈತನ್ಯ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗಿನ ಅವಧಿಯ ನಡುವೆ ಆಕೆ ವಸತಿ ನಿಲಯದ ಕೊಠಡಿಯಲ್ಲಿ ಕಿಡಕಿಯ ಸರಳಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಭಾರ ಪಿಎಸ್‍ಐ ಜೆ.ಬಿ.ಸೀತಾರಾಮ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಸಂಸ್ಥೆಗೆ ಆಘಾತ….
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು ಸಂಸ್ಥೆಯ ವಸತಿ ನಿಲಯಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಗೆ ಆಘಾತ ತಂದಿದೆ. ಆತ್ಮಹತ್ಯೆ ಎಂಬುದು ಇತ್ತೀಚೆಗೆ ಮಾಮೂಲಾಗುತ್ತಿದ್ದು, ಕೆಲವೊಮ್ಮೆ ಕ್ಷುಲಕ ಕಾರಣಕ್ಕೂ ಸಾವಿನ ಕದ ತಟ್ಟುತ್ತಿರುವುದು ಖೇದದ ಸಂಗತಿಯಾಗಿದೆ. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಈ ಕುರಿತು ಸಭೆ ನಡೆಸಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಅವರ ಕೆಲ ಸಮಸ್ಯೆಗಳನ್ನು ಆಲಿಸಬೇಕಿದೆ ಎಂಬ ಅಭಿಪ್ರಾಯ ಪಾಲಕ ಸಮುದಾಯದಿಂದ ಕೇಳಿ ಬಂದಿದೆ.

loading...

LEAVE A REPLY

Please enter your comment!
Please enter your name here