ಇಂದು ವಿಶ್ವ ಏಡ್ಸ್ ದಿನಾಚರಣೆ

0
19
loading...

ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ವಿಜಯಪುರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಎನ್.ಎಸ್.ಎಸ್.ಘಟಕಗಳ ರೆಡ್ ರಿಬ್ಬನ್ ಕ್ಲಬ್‍ಗಳ ಸಂಯುಕ್ತ ಆಶ್ರಯದಲ್ಲಿ ಡಿ.1ರಂದು ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 8.30ಕ್ಕೆ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾ ಮಟ್ಟದ ಜಾಥಾ ಕಾರ್ಯಕ್ರಮ ಹಾಗೂ ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತ ಸತ್ರ ನ್ಯಾಯಾಧೀಶ ಸೋಮರಾಜು ಉದ್ಘಾಟಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಗುಂಡಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ದಿವಾನ ನ್ಯಾಯಾಧೀಶ ಅಭಯ ಡಿ.ಚೌಗಲಾ, ಜಿಲ್ಲಾ ಶಸ್ತ್ರಚಿಕಿತ್ಸಕ ಅನಂತ ಎನ್.ದೇಸಾಯಿ, ವಾರ್ತಾಧಿಕಾರಿ ಡಾ: ಬಿ.ಆರ್.ರಂಗನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಎಸ್.ಟಿ.ತಳವಾರ, ಡಾ: ಎಸ್.ಎಸ್.ಯರನಾಳ, ಪ್ರದೀಫ ಬೈಲಪತ್ತಾರ ಭಾಗವಹಿಸಲಿದ್ದಾರೆ.

loading...

LEAVE A REPLY

Please enter your comment!
Please enter your name here