ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ

0
31
loading...

news-2ಮುಂಡರಗಿ,7: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯು ಶನಿವಾರ ಗದುಗಿನ ಸಿಡಿಒ ಜೈನ್ ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸ ಪ್ರಶ್ನೆ (ಕ್ವಿಜ್) ಸ್ಪರ್ಧೆಯಲ್ಲಿ ತಾಲ್ಲೂಕಿನ ಶಿಂಗಟಾಲೂರ ವೀರಭದ್ರೇಶ್ವರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಮಹಾಗಣಪತಿ ಬಿಳಿಮಗ್ಗದ, ಒಂಭತ್ತನೇ ತರಗತಿಯ ಸುವರ್ಣ ಶೆಟ್ಟರ, ಹತ್ತನೇ ತರಗತಿಯ ವಿನಾಯಕ ಕರ್ನೂಲ ಹಾಗೂ ಕಾವೇರಿ ಹಿರೇಮಠ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ರಸ ಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ, ಸಂಸದೀಯ ಕಾರ್ಯದರ್ಶಿ ಹಾಗೂ ಶಾಲಾ ಎಸ್‍ಡಿಎಂಸಿ ಅಧ್ಯಕ್ಷರಾದ ರಾಮಕೃಷ್ಣ ದೊಡ್ಡಮನಿ, ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸಮೀತಿ ಅಧ್ಯಕ್ಷ ಹೇಮಗಿರಿಶ ಹಾವಿನಾಳ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುನಾಥ ಮುಂಡವಾಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ.ರಡ್ಡೇರ, ಬಿಆರ್‍ಸಿಯ ಶಂಕರ ಹಡಗಲಿ, ಮುಖ್ಯ ಶಿಕ್ಷಕ ಎಂ.ಎಸ್.ಪೂಜಾರ ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

loading...

LEAVE A REPLY

Please enter your comment!
Please enter your name here