ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0
16
loading...

 

ಚಿಕ್ಕೋಡಿ 8 : ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಸರಕಾರಿ ಉರ್ದು ಶಾಲೆಯ ಮಕ್ಕಳ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಮ್ದ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಮಿಸ್ಬಾ ಇಮ್ತಿಯಾಜ್ ಮುಲ್ಲಾ, ಏಕಪಾತ್ರಾಭಿನಯದಲ್ಲಿ ಮಹಮ್ಮದಕೈಫ್ ಮೆಹಬೂಬ್ ನಾಯಿಕವಾಡಿ, ನಿಬಂಧ ಸ್ಪರ್ಧೆಯಲ್ಲಿ ಮಹಬೂಬಿ ಸುಲ್ತಾನ್ ಸೈಯ್ಯದ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಅಮ್ರಿನ್ ಮೆಹಬೂಬ್ ಪಟೇಲ್ ಮತ್ತು ಸೂಫಿಯಾ ಅನ್ವರ್ ಮುಜಾವರ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯಶಸ್ಸು ಪಡೆದ ವಿದ್ಯಾರ್ಥಿಗಳನ್ನು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮೆಹಬೂಬ್ ಪಟೇಲ್ ಹಾಗೂ ಪದಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕಿ ಎ.ಜಿ.ಗೌಂಡಿ ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.

loading...

LEAVE A REPLY

Please enter your comment!
Please enter your name here