ಮದ್ಯ ಮಾರಾಟ ನಿರ್ಬಂಧ

0
11
loading...

ಕಾರವಾರ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 27ರ ಸಂಜೆ 4ಗಂಟೆವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರು ಆದೇಶಿಸಿದ್ದಾರೆ.
ಮುಕ್ತ ಹಾಗೂ ನ್ಯಾಯಸಮ್ಮತ, ಶಾಂತಿಯುತ ವಾತಾವರಣದಲ್ಲಿ ಮತದಾನವನ್ನು ನಡೆಸಲು ಅನುಕೂಲವಾಗುವಂತೆ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಅಡಿ ಕಾರ್ಯಾಚರಿಸುತ್ತಿರುವ ಸನ್ನದು ಆವರಣಗಳನ್ನು, ಮಾರಾಟ ಕೇಂದ್ರಗಳನ್ನು, ಹಾಗೂ ಇನ್ನುಳಿದ ಯಾವುದೇ ವಿವಿಧ ಮದ್ಯ ಮಾರಾಟದ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮದ್ಯ ಮಾರಾಟ ಕೇಂದ್ರಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ಹೋಟೇಲ್‍ಗಳಲ್ಲಾಗಲಿ, ನಾನ್ ಪ್ರೊಪೈಟರಿ ಕ್ಲಬ್‍ಗಳಲ್ಲಿ ಮದ್ಯ ಮಾರಾಟ, ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಎಲ್ಲರೊಳಗೊಂದಾಗು ಮಂಕುತಿಮ್ಮ

loading...

LEAVE A REPLY

Please enter your comment!
Please enter your name here