ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ , ಸರ್ಕಾರದ ವಿಶಿಷ್ಟವಾದ ಯೋಜನೆಯಾಗಿ : ಮನ್ನಿಕೇರಿ

0
67
loading...

ಗೋಕಾಕ 20: ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸದ ಕಾರ್ಯಕ್ರಮ ವಿಶಿಷ್ಟವಾದ ಯೋಜನೆಯಾಗಿದ್ದು ಈ ಪ್ರವಾಸದಿಂದ ವಿದ್ಯಾರ್ಥಿಗಳು ತಮ್ಮ ಅಭಿವೃದ್ದಿಯ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡಬೇಕು ಎಂದು ಚಿಕ್ಕೋಡಿಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.
ಶನಿವಾರದಂದು ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಕರ್ನಾಟಕ ಸರ್ಕಾರ, ಜಿಪಂ ಬೆಳಗಾವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ 2015-16 ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಈ ಶೈಕ್ಷಣಿಕ ಪ್ರವಾಸದಿಂದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಗತವೈಭವ ಇತಿಹಾಸವನ್ನು ತಿಳಿಯಬಹುದಾಗಿದೆ. ಶೈಕ್ಷಣಿಕ, ವೈಜ್ಞಾನಿಕ ದೃಷ್ಟಿಯಿಂದ ಪ್ರವಾಸಿ ತಾಣಗಳನ್ನು ತಮ್ಮ ಕಣ್ಣಾರೆ ಕಂಡು ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬಿಇಓ ಜಿ.ಬಿ. ಬಳಗಾರ ಮಾತನಾಡಿ ಸರ್ಕಾರ ವಿದ್ಯಾರ್ಥಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಲಾಭವನ್ನು ಪಡೆದುಕೊಳ್ಳಬೇಕು. ಪ್ರವಾಸದ ಸಂದರ್ಭದಲ್ಲಿ ಅಲ್ಲಿಯ ತಾಣಗಳ ಬಗ್ಗೆ ಗಮನಕೊಟ್ಟು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಶಿಕ್ಷಕರ ಅನತಿಯಂತೆ ನಡೆದುಕೊಳ್ಳಬೇಕು. ತಮ್ಮ ಈ ಪ್ರವಾಸ ಯಶ್ವಸಿಯಾಗಿ ಸಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
5 ದಿನಗಳ ಈ ಪ್ರವಾಸದಲ್ಲಿ ಬಾದಾಮಿ, ಐಹೊಳೆ, ಪಟ್ಟದಕಲ್ಲು, ಕೂಡಲಸಂಗಮ, ಹೊಸಪೇಟೆ, ಹಂಪಿ, ಚಿತ್ರದುರ್ಗ, ಶ್ರವಣಬೆಳಗೊಳ, ಬೆಲೂರು, ಹಳೆಬೀಡು ಸೇರಿದಂತೆ ಇನ್ನೂ ಹಲವಾರು ಐತಿಹಾಸಿಕ ಸ್ಥಳಗಳನ್ನು ವಿದ್ಯಾರ್ಥಿಗಳು ವೀಕ್ಷಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಪಿ.ಎಚ್ ಕೌಜಲಗಿ. ಕ್ಷೇತ್ರ ಸಮನ್ವಯ ಅಧಿಕಾರಿ ಜಿ. ಆರ್. ಮಾಳಗಿ. ಎಸ್.ಜಿ. ವಲ್ಯಾಪೂರ. ಆರ್. ಜಿ.ಚಳಗೇರಿ ಬಿ.ಎಸ್.ಸೊಲಬನ್ನವರ ಸೇರಿದಂತೆ ಶಿಕ್ಷಕರು ಪಾಲಕರು ಇದ್ದರು.

loading...

LEAVE A REPLY

Please enter your comment!
Please enter your name here