ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

0
20
loading...

ಬಾಗಲಕೋಟ 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಜನವರಿ 2, 2016 ರಂದು ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗೆ 10.30ಕ್ಕೆ ನವನಗರದ ಜಿಲ್ಲಾ ಕ್ರೀಡಾಂಗದಲ್ಲಿ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಕ್ರೀಡಾಕೂಟಗಳನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಮ್.ಬಿ.ಬಳ್ಳಾರಿ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ರಾಜ್ಯ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಮ್.ಪಟೇಲಪಾಂಡು, ಮುಖ್ಯ ಅತಿಥಿಗಳಾಗಿ ಜಿ.ಪಂ ಸಿಇಓ ಎಂ.ಜಿ.ಹಿರೇಮಠ, ಎಸ್.ಪಿ ಯಡಾ ಮಾರ್ಟಿನ್, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಭಾಗವಹಿಸಲಿದ್ದಾರೆ.

loading...

LEAVE A REPLY

Please enter your comment!
Please enter your name here