ಹಕ್ಕುಗಳ ರಕ್ಷಣೆಗೆ ಎಲ್ಲರೂ ದುಡಿಯೋಣ

0
16
loading...

ಹಾವೇರಿ:ಡಿ.10:    ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಗೌರವದಿಂದ ಜೀವಿಸುವ ಹಕ್ಕಿದೆ. ಭಾರತ ಮಾನವ ಹಕ್ಕುಗಳಿಗೆ ಹೆಚ್ಚಿನ ಮಹತ್ವ ನೀಡಿದೆ. ಸಮಾಜದಲ್ಲಿ ಧಾರ್ಮಿಕ, ಶೈಕ್ಷಣಿಕ, ಮಹಿಳಾ ಮತ್ತು ಮಕ್ಕಳು ಹಕ್ಕುಗಳು ಸೇರಿದಂತೆ ಅನೇಕ ಹಕ್ಕುಗಳಿವೆ, ಅವುಗಳ ಸಂರಕ್ಷಣೆಗೆ ನಾವು-ನೀವು ಎಲ್ಲರೂ ಕಂಕಣಬದ್ಧರಾಗಿ ದುಡಿಯೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಈಶಪ್ಪಾ ಕೆ.ಭೂತೆ ಅವರು ಹೇಳಿದರು.
ಅವರು ಇಂದು ನಗರದ ಡಿ.ದೇವರಾಜ ಅರಸು ಭವನದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ, ಹಾವೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕೇಂದ್ರ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ರಚಿಸಲಾಗಿದ್ದು, ಈ ಆಯೋಗದಡಿ ಅನೇಕ ನ್ಯಾಯ ಒದಗಿಸಲಾಗಿದ್ದು, ಈ ನಿಟ್ಟಿನಲ್ಲಿ ನ್ಯಾಯಾಂಗ ಅತ್ಯಂತ ಪ್ರಮುಖ ಅಂಗವಾಗಿದೆ. ಹಕ್ಕುಗಳ ರಕ್ಷಣೆಗೆ ಅನೇಕರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಎಲ್ಲಿ ಹಕ್ಕುಗಳ ಉಲ್ಲಂಘನೆಯಾಗುತ್ತದೆಯೋ ಅಲ್ಲಿ ಮಾನವ ಹಕ್ಕುಗಳ ಆಯೋಗ ಮದ್ಯಪ್ರವೇಶಿಸುತ್ತದೆ ಹಾಗೂ 24 ತಾಸುಗಳ ಕಾಲ ಕರ್ತವ್ಯ ನಿರ್ವಹಿಸುತ್ತದೆ. ಭಾರತದ ಸಂವಿಧಾನ ಪ್ರಕಾರ ಎಲ್ಲಾ ಅಧಿಕಾರಿಗಳು ಹಕ್ಕುಗಳ ರಕ್ಷಣೆ ಮಾಡಬೇಕೆಂದರಲ್ಲದೇ, ಮಾನವ ಹಕ್ಕುಗಳ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕೆಂದು ತಿಳಿಸಿದರು.
ಉಪನ್ಯಾಸಕರಾಗಿ ಭಾಗವಹಿಸಿದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಚಂದ್ರಶೇಖರ ಮುದಕಣ್ಣನವರ ಅವರು ಮಾತನಾಡಿ, 1948 ರಲ್ಲಿ ಮಾನವ ಹಕ್ಕುಗಳನ್ನು ರೂಪಿಸಲಾಯಿತು. 1950 ಡಿಸೆಂಬರ್ 10 ರಂದು ಮೊದಲ ಬಾರಿಗೆ ಮಾನವ ಹಕ್ಕುಗಳ ದಿನಾಚರಣೆ ಆಚರಿಸಲಾಯಿತು. ಎಲ್ಲರಿಗೂ ಸಮಾನ ಹಕ್ಕು ಒದಗಿಸುವುದು ಆಯೋಗದ ಮುಖ್ಯ ಕರ್ತವ್ಯವಾಗಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದಾಗ  ಆಯೋಗ ಮಧ್ಯ ಪ್ರವೇಶಿಸಿ ವಿಚಾರಣೆ ಮಾಡುವ ಅಧಿಕಾರ ಹೊಂದಿರುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ರಮನದೀಪ ಚೌಧರಿ ಅವರು ಮಾತನಾಡಿ, ಪ್ರತಿಯೊಬ್ಬ ಮಾನವ ಗೌರವಯುತ ಜೀವನ ನಡೆಸಲು ಮಾನವ ಹಕ್ಕುಗಳ್ನು ರಚಿಸಲಾಗಿದ್ದು, ಸಾರ್ವಜನಿಕರ ಸಂಪತ್ತು ಹಾಗೂ ವಯಕ್ತಿಕ ಸಂಪತ್‍ನ್ನು ಆಯೋಗ ರಕ್ಷಣೆ ಮಾಡುತ್ತಾ ಬಂದಿದೆ. ಆರ್ಥಿಕ ದುರ್ಬಲರ ಏಳ್ಗೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಈ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಮ್ಮ ನಿಮ್ಮೆಲರ ಪಾತ್ರ ಹಿರಿದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಅಸೋದೆ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ರವೀಂದ್ರ ಜೆ.ಪಲ್ಲೇದ, ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರಾದ ರವಿ ಡಿ.ಅರಿ, ಹೆಚ್ಚುವರಿ ಕಿರಿಯ ದಿವಾಣಿ ನ್ಯಾಯಾಧೀಶರಾದ ಎನ್.ಅನುಪಮಾ,  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ.ಅಂಜನಪ್ಪ, ಜಿಲ್ಲಾ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಚ್.ವಾಲಿಕಾರ ಅವರು ಉಪಸ್ಥಿತರಿದ್ದರು.
ಹಾವೇರಿ ಉಪವಿಭಾಗಾಧಿಕಾರಿ ಬಸವರಾಜ್ ಸೋಮಣ್ಣನವರ ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ ಪ್ರಮಾಣವಚನ ಬೋಧಿಸಿ, ನಂತರ ವಂದಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಅಂಬಿಗೇರ ಕಾರ್ಯಕ್ರಮ ನಿರೂಪಿಸಿದರು.

loading...

LEAVE A REPLY

Please enter your comment!
Please enter your name here