ಒಗ್ಗಟ್ಟಿನಿಂದ ಜಿಪಂ,ತಾಪಂ ಚುನಾವಣೆಯಲ್ಲಿ ಗೆಲ್ಲೋಣ : ಪಾಟೀಲ

0
21
loading...

ಬೈಲಹೊಂಗಲ 24: ಬರುವ ಜಿಲ್ಲಾ ಪಂಚಾಯತ ಹಾಗೂ ತಾಲೂಕಾ ಪಂಚಾಯತ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮವಹಿಸುವಂತೆ ಶಾಸಕ ಡಾ. ವಿಶ್ವನಾಥ ಪಾಟೀಲ ಹೇಳಿದರು.
ಅವರು ಪಟ್ಟಣದ ತಮ್ಮ ಕಚೇರಿಯಲ್ಲಿ ನಡೆದ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬರುವ ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯತ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೇಟ್ ಆಕಾಂಕ್ಷಿಗಳ ಮತ್ತು ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ, ಪಕ್ಷದ ವತಿಯಿಂದ ಚುನಾವಣೆ ಎದುರಿಸಲು ಕಾರ್ಯಕರ್ತರು ತಯಾರಿದ್ದು ಸೂಕ್ತ ಅಭ್ಯರ್ಥಿಗಳಿಗೆ ಟಿಕೇಟ ನೀಡಲಾಗುವದು ಎಂದರಲ್ಲದೆ ಪಕ್ಷದ ಕಾರ್ಯಕರ್ತರು ಒಕ್ಕಟ್ಟಿನಿಂದ ಶ್ರಮವಹಿಸಿ ಪಕ್ಷ ಅಭ್ಯರ್ಥಿಗಳು ಬಾರಿ ಬಹುಮತದಿಂದ ಆಯ್ಕೆಯಾಗುವಂತೆ ನೋಡಿಕೊಳ್ಳಬೇಕು. ರಾಜ್ಯ ಕಾಂಗ್ರೇಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ತಾಪಂ, ಜಿಪಂ ಟಿಕೇಟ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಇದ್ದರು.

loading...

LEAVE A REPLY

Please enter your comment!
Please enter your name here