ಕಾರ್ಯಕರ್ತರು ಪಕ್ಷದ ಬೇರು- ಅವರಿಲ್ಲದೆ ಸಂಸತಗೆ ಪ್ರವೇಶವಿಲ್ಲ: ಅನಂತಕುಮಾರ

0
22
loading...

ಮಾಂಜರಿ 20: ಕಳೆದ ಬಿಜೆಪಿ ಸರಕಾರದ ಆಡಳಿತ ಅವಧಿಯಲ್ಲಿ ಅಭಿವೃದ್ಧಿಗಾಗಿ ಹಣದ ಹೊಳೆ ಹರಿದಿದೆ. ಆದರೆ ಇಂದಿನ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಮಾಡಲು ಹಿಂದೆ ಬಿದ್ದಿದೆ. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲದಂತಾಗಿದೆ ಎಂದು ರಾಜ್ಯಸಭೆ ಸದಸ್ಯ ಡಾ,ಪ್ರಭಾಕರ ಕೋರೆ ಆರೋಪಿಸಿದರು.
ಮಂಗಳವಾರ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಹಮ್ಮಿಕೊಂಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ಬಗ್ಗೆ ಎಲ್ಲ ಕಡೆ ವಿರೋಧ ಅಲೆ ಪ್ರಾರಂಭವಾಗಿದೆ. ಮುಖ್ಯಮಂತ್ರಿಗಳು ಜನರ ಕಷ್ಟಗಳಿಗೆ ಸ್ಪಂಧಿಸುತ್ತಿಲ್ಲ. ಅದಕ್ಕಾಗಿ ಬರುವ ಜಿಲ್ಲಾ ಮತ್ತು ತಾಲೂಕಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.
ಕೇಂದ್ರ ಸಚಿವ ಅನಂತಕುಮಾರ ಮಾತನಾಡಿ, ಗಡಿ ಭಾಗದಲ್ಲಿ ಹೆಚ್ಚಿನ ರೈತರು ಕಬ್ಬು ಬೆಳೆಯುತ್ತಾರೆ. ಆದರೆ ಕಬ್ಬು ಬೆಳೆದ ರೈತರಿಗೆ ಯೋಗ್ಯ ಬೆಲೆ ಕೊಡುತ್ತಿಲ್ಲ. ಬಿಜೆಪಿ ಸರಕಾರದ ಅನೇಕ ಜನಪರ ಯೋಜನೆಗಳನ್ನು ಕೈಬಿಡುತ್ತಿದ್ದಾರೆ. ಸಮರ್ಪಕವಾಗಿ ಕೇಂದ್ರದ ಅನುದಾನ ಬಳಕೆ ಮಾಡಿಕೊಳ್ಳಲು ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ತಕ್ಕ ಪಾಠ ಕಲಿಸಲು ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕಳೆದ ಹದಿನೈದು ದಿನಗಳ ಹಿಂದೆ ಕೇಂದ್ರದಿಂದ ರಾಜ್ಯಕ್ಕೆ ಬರಗಾಲದ ಪ್ಯಾಕೇಜ ನೀಡಲಾಗಿದೆ. ಇನ್ನೂ ಹಣ ರೈತರಿಗೆ ತಲುಪಿಲ್ಲ. ಅದಕ್ಕಾಗಿ ಎರಡು ದಿನಗಳ ನಂತರ ಇಡೀ ರಾಜ್ಯಾಧ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಆರಂಭಿಸಬೇಕು ಮತ್ತು ಚುನಾವಣೆಯಲ್ಲಿ ಹಣದ ಹೊಳೆ ಹರಿಸುವ ಕಾಂಗ್ರೆಸ್ ಸರಕಾರವನ್ನು ದಿಕ್ಕರಿಸಿ ಬಿಜೆಪಿಗೆ ಮತ ಹಾಕಾಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಲಕ್ಷ್ಮಣ ಸವದಿ ಮಾತನಾಡಿ. ಅಥಣಿ ತಾಲೂಕಿನಲ್ಲಿ ಅನೇಕ ಜನಪರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರಿಂದ ಕ್ಷೇತ್ರದಲ್ಲಿ ಬಿಜೆಪಿ ಗಟ್ಟಿಯಾಗಿದೆ. ಅಥಣಿ ತಾಲೂಕಿನಲ್ಲಿ ಸುಮಾರು 11 ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸುತ್ತಾರೆ ಎಂದು ಹೇಳಿದರು.
ಮಾಜಿ ಸಚಿವ ಉಮೇಶ ಕತ್ತಿ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕ ಸಂಜಯ ಪಾಟೀಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ದುರ್ಯೋಧನ ಐಹೋಳೆ, ಸೋಮಣ್ಣಾ ಬೇವಿನಮರದ, ಮಾಜಿ ಸಚಿವ ಶಶಿಕಾಂತ ನಾಯಿಕ, ಬಿ.ಸಿ.ಸರಿಕರ, ಜಿ.ಪಂ.ಸದಸ್ಯ ಮಹೇಶ ಭಾತೆ, ನಾಗೇಶ ಕಿವಡ, ಅಪ್ಪಾಸಾಹೇಬ ಚೌಗಲಾ, ದುಂಡಪ್ಪ ಬೆಂಡವಾಡೆ, ಅಜೀತ ದೇಸಾಯಿ, ಭರತೇಶ ಬಣವಣೆ, ದತ್ತು ಸಪ್ತಸಾಗರೆ, ಮಲ್ಲಿಕಾರ್ಜುನ ಕೋರೆ, ಜಗದೀಶ ಕವಟಗಿಮಠ, ಸುರೇಶ ಪಾಟೀಲ, ತುಕಾರಾಮ ಪಾಟೀಲ, ಸುಜಾತ ಖೋತ, ಉಮೇಶ ಬಂಟೋಡ್ಕರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಸ್ವಾಗತಿಸಿದರು. ರವಿ ಹಿರೇಮಠ ನಿರೂಪಿಸಿದರು. ಸತೀಶ ಅಪ್ಪಾಜಿಗೋಳ ವಂದಿಸಿದರು.

loading...

LEAVE A REPLY

Please enter your comment!
Please enter your name here