ತೇರದಾಳದಲ್ಲಿ ಸ್ತ್ರೀ ಶಕ್ತಿ ಸಮಾವೇಶ ಇಂದು

0
26
loading...

ಬಾಗಲಕೋಟ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜನವರಿ 5 ರಂದು ತೇರದಾಳದಲ್ಲಿ ಸ್ತ್ರೀ ಶಕ್ತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ತೇರದಾಳದ ಮಹಾತ್ಮಾಗಾಂಧೀ ಕ್ರೀಡಾಂಗಣದಲ್ಲಿ ಜರುಗುವ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆ ಸಚಿವರಾದ ಸತೀಶ ಜಾರಕಿಹೊಳೆ ಉದ್ಘಾಟಿಸಲಿದ್ದಾರೆ. ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಆರ್.ಪಾಟೀಲ ಸುತ್ತುನಿಧಿ ಆದೇಶ ಪತ್ರ ವಿತರಿಸುವರು. ಅಧ್ಯಕ್ಷತೆಯನ್ನು ಕನ್ನಡ ಮತ್ತು ಸಂಸ್ಕøತಿ ಸಚಿವೆ ಉಮಾಶ್ರೀ ವಹಿಸಲಿದ್ದು, ಸಂಸದ ಪಿ.ಸಿ.ಗದ್ದಿಗೌಡರ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ ಅಧ್ಯಕ್ಷ ಬಸವಂತಪ್ಪ ಮೇಟಿ, ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ. ಅಂದು ಸಂಜೆ 6 ಗಂಟೆಗೆ ಮಹಾತ್ಮಾಗಾಂಧೀ ಕ್ರೀಡಾಂಗಣದಲ್ಲಿ ಬೆಂಗಳೂರಿನ ರಾಜ್ಯ ಜಾನಪದ ಅಕಾಡೆಮಿ ಇವರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

loading...

LEAVE A REPLY

Please enter your comment!
Please enter your name here