ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮ

0
18
loading...

ಧಾರವಾಡ,19: ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದು ಜ.21 ರಂದು ಮಧ್ಯಾಹ್ನ 12.30ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯುವ ಸಮಾರಂಭದಲ್ಲಿ ಸಮಾಜ ಬಾಂಧವರು ತಪ್ಪದೆ ಭಾಗವಹಿಸುವಂತೆ ಸಮಾಜ ಮುಖಂಡ ಎಸ್.ಕೆ.ಮೇಲಕಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭದಲ್ಲಿ ಸರ್ಕಾರಕ್ಕೆ ಆಗ್ರಹ ಮಾಡುವ ವಿಷಯವೆಂದರೆ ದಾನೇಶ್ವರ ನಗರದ ಹಿಂಭಾಗದಲ್ಲಿ ಅಂಬಿಗರ ಚೌಡಯ್ಯನವರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಿಸಲು ಈಗಾಗಲೇ 15 ಗುಂಟೆ ಜಾಗ ನೀಡಿದ್ದು, ಸಮುದಾಯ ಭವನ ಸ್ಥಾಪನೆಗೆ ಸರ್ಕಾರದ ವತಿಯಿಂದ 1 ಕೋಟಿ ಅನುದಾನ ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮುದಾಯದ ಜನರಿಗೆ ನೀಡುವ ಸೌಲಭ್ಯಗಳನ್ನು ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.
ಜಿಲ್ಲೆಯಲ್ಲಿ ಸಮಾಜದ ಸಮುದಾಯ ಭವನ, ವಿದ್ಯಾರ್ಥಿಗಳ ವಸತಿ ನಿಲಯ ಸ್ಥಾಪಿಸುವಂತೆ ಈ ಹಿಂದಿನಿಂದಲೂ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸುಮಾರು 40 ಎಕರೆ ಜಮೀನನ್ನು ಅಂಬಿಗರ ಚೌಡಯ್ಯನವರ ಸಮಾಜದ ವತಿಯಿಂದ ನೀಡಲಾಗಿದ್ದು, ಅದೇ ಜಾಗದಲ್ಲಿ ಅಂಬಿಗರ ಚೌಡಯ್ಯ ಪೀಠವನ್ನು ಸ್ಥಾಪಿಸಲು ಮುಂದಾಗಬೇಕು ಹಾಗೂ ಸಮಾಜದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ಭೀಮಕ್ಕನವರ, ಅರವಿಂದ ಏಗನಗೌಡರ, ಯಲ್ಲಪ್ಪ ಸುಣಗಾರ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here