ಬಿಜೆಪಿ ಅಧಿಕಾರಕ್ಕೆ ತರುವ ಮುಖ್ಯ ಗುರಿ:ಬಿಎಸ್‍ವಾಯ್

0
20
loading...


ಬೆಳಗಾವಿ 27: ರಾಜ್ಯದಲ್ಲಿ ಪ್ರವಾಸ ನಡೆಸಿ ಪಕ್ಷವನ್ನು ಸಂಘಟಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ತಮ್ಮ ಮುಖ್ಯ ಗುರಿಯಾಗಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ನಗರದ ಕೆಎಲ್‍ಇಯ ಪ್ರವಾಸಿ ಮಂದಿರಲ್ಲಿ ಕಾರ್ಯಕರ್ತರಿಂದ ತಮ್ಮ ಜನ್ಮದಿನವನ್ನು ಆಚರಿಸಿಕೊಂಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಪ್ರತಿಯೊಂದು ಹಳ್ಳಿ ಹಳ್ಳಿಗೂ ತೆರಳಿ ರಾಜ್ಯ ಸರಕಾರದ ಆಡಳಿತ ವೈಕರಿ ವಿರುದ್ಧ ಪ್ರಚಾರ ನಡೆಸಿ ಬಿಜೆಪಿ ಪಕ್ಷವನ್ನು ಸಂಘಟಿಸಲಾಗುವುದೆಂದು ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರೈತರು ಭಾಗವಹಿಸುತ್ತಿರುವ ಫಸಲ ಭೀಮಾ ಯೋಜನೆ ಕಾರ್ಯಕ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಸಂತಸ ತಂದಿದೆ, ಇದು ಮರೆಯಲಾಗದ ಕ್ಷಣವಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರದಾನಿಯಾಗಿದ್ದಾಗ ತಮ್ಮ ಹುಟ್ಟುಹಬ್ಬದಲ್ಲಿ ಭಾಗವಹಿಸಿದ್ದರು ಎಂದು ಬಿಎಸ್‍ವಾಯ್ ಹೇಳಿದರು.
ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಮಾಡಲಾಗದ ಅನೇಕ ಅಭಿವೃದ್ಧಿ ಪರ ಕೆಲಸವನ್ನು ಪ್ರಧಾನಿಯವರು ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯಲ್ಲಿ ಖುಷ್ಕಿ ಭೂಮಿಗೆ ಶೇ ಒಂದುವರೆ, ನೀರಾವರಿ ಜಮೀನುಗಳಿಗೆ ಶೇ. 2 ರಷ್ಟು ಹಾಗೂ ತೋಟಗಾರಿಕೆ ಜಮೀನುಗಳಿ ಶೇ. 5 ರಷ್ಟು ವಿಮೆ ಪಾವತಿಸಿಬೇಕು. ಶೇ 33 ರಷ್ಟು ಬೆಳೆಹಾನಿಯಾದರೆ ಎರಡ ಪಟ್ಟು ದ್ವಿಗುನ ವಿಮೆ ಹಣ ರೈತರಿಗೆ ದೊರೆಯಲ್ಲಿದೆ ಎಂದರು.
ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಕಳಸಾ-ಬಂಡೂರಿ ಯೋಜನೆ ಶಾಶ್ವತ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿದ್ದರು. ತಾವು ಮುಖ್ಯಮಂತ್ರಿಗಳಾಗಿದ್ದಾಗ ಕಳಸಾ-ಬಂಡೂರಿ ನಾಲಾ ಕಾಮಗಾರಿಗೆ 100 ಕೋಟಿ ಹಣ ನೀಡಿದೆ. ಗೋವಾ ಚುನಾವಣಾ ಪ್ರಚಾರದಲ್ಲಿ ಸೋನಿಯಾ ಗಾಂಧಿ ಅವರು ಯಾವುದೇ ಕಾರಣಕ್ಕೂ ಕರ್ನಾಟಕ್ಕೆ ಮಹದಾಯಿ ನೀರು ಬಿಡುವುದಿಲ್ಲವೆಂದು ಹೇಳಿಕೆ ನೀಡಿದ್ದಾರೆ. ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಪ್ಪಿಸಲಾಗುವುದು ಎಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ಅಲ್ಲಿನ ವಿರೋದ ಪಕ್ಷಗಳನ್ನು ಒಪ್ಪಿಸಲು ಹಿಂದೆಟ್ಟು ಹಾಕಿತ್ತಿದೆ ಎಂದರು.
ಮೈಸೂರಿಗೆ ರಾಹುಲ ಗಾಂಧಿ ಬೇಟಿ ನೀಡಿದಾಗ ಅವರೊಂದಿಗೆ ಕಳಸಾ ಬಂಡೂರಿ ಯೋಜನೆಯ ಬಗ್ಗೆ ಮಾತನಾಡಿದ್ದೆ, ಅವರು ಭರವಸೆ ನೀಡಿದ್ದರು ಆದರೆ ಸೋನಿಯಾ ಗಾಂಧಿ, ರಾಹುಲ ಗಾಂಧಿ ಯೋಜನೆಯ ಶಾಶ್ವತ ಪರಿಹಾರಕ್ಕಾಗಿ ಸ್ಪಂದಿಸುತ್ತಿಲ್ಲ, ಸಮಸ್ಯೆ ಪರಿಹಾರಕ್ಕೆ ಆಡಳಿತ ಮತ್ತು ವಿರೋದ ಪಕ್ಷಗಳ ಸಹಕಾರ ಅಗತ್ಯವೆಂದು ಯಡಿಯೂರಪ್ಪ ತಿಳಿಸಿದರು.
ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವಂತೆ ಪ್ರಧಾನಿಯವರನ್ನು ಒತ್ತಾಯಿಸುತ್ತಿರಾ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಮೋದಿ ಅವರು ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದರೆ ಕೃಷಿಕರಿಗೆ ಅನಕೂಲ, ಕೃಷಿಗೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿಯವರನ್ನು ಒತ್ತಾಯ ಮಾಡುತ್ತೆನೆಂದು ತಿಳಿಸಿದರು.
ಶಾಸಕರಾದ ಉಮೇಶ ಕತ್ತಿ, ಡಾ. ವಿಶ್ವನಾಥ ಪಾಟೀಲ, ಲಕ್ಷ್ಮಣ ಸವದಿ, ಮಹಾಂತೇಶ ಕವಟಗಿಮಠ, ಸಿ.ಟಿ.ರವಿ, ರಾಜೀವ ಟೋಪ್ಪಣವರ ಸೇರಿದಂತೆ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here