ಬಿಜೆಪಿ ಅಭ್ಯರ್ಥಿಗಳ ಜಯ, ಶಾಕರರ ಸಂತಸ

0
17
loading...

ಗೋಕಾಕ 23: ಅರಭಾವಿ ವಿಧಾನಸಭಾ ಮತಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಶಾಲಿಯಾಗಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಆರು ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಪೈಕಿ 5 ರಲ್ಲಿ ಬಿಜೆಪಿ ಹಾಗೂ 23 ತಾಲೂಕಾ ಪಂಚಾಯತಿ ಕ್ಷೇತ್ರಗಳ ಪೈಕಿ ಬಿಜೆಪಿ 15 ಅಭ್ಯರ್ಥಿಗಳು ಜಯಭೇರಿ ಬಾರಿಸಿ ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಪಾರುಮತ್ಯ ಸಾಧಿಸಿದೆ.
ಫೆ.13 ರಂದು ನಡೆದ ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ವಡೇರಹಟ್ಟಿ ಹಾಗೂ ಹಳ್ಳೂರ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಹಾಗೂ 8 ತಾಲೂಕಾ ಪಂಚಾಯತ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ರಾಜ್ಯದಲ್ಲಿಯೇ ಬಿಜೆಪಿ ಖಾತೆ ತೆರೆಯಲು ನೆರವಾಗಿದೆ. ಈ ಚುನಾವಣೆಯು 2018 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯು ಎರಡು ಸ್ಥಾನಗಳನ್ನು ಪಡೆದು ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ ಎಂದು ಹೇಳಿದ್ದಾರೆ.
ಅರಭಾವಿ ಕ್ಷೇತ್ರದಲ್ಲಿ ನನ್ನ ಅಧಿಕಾರವಧಿಯಲ್ಲಿ ಕೈಗೊಂಡಿರುವ ಜನೋಪಯೋಗಿ ಕಾರ್ಯಗಳು ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವನೆಯನ್ನು ನೂತನ ಸದಸ್ಯರು ಬೆಳೆಸಿಕೊಳ್ಳುವಂತೆ ಅವರು ಸಲಹೆ ಮಾಡಿದ್ದಾರೆ. 5 ಜಿಪಂ ಹಾಗೂ 15 ತಾಪಂ ಸದಸ್ಯರನ್ನು ವಿಜಯಶಾಲಿಯನ್ನಾಗಿ ಮಾಡಿರುವ ಸಮಸ್ತ ಮತದಾರ ಪ್ರಭುಗಳು ಹಾಗೂ ಗೆಲುವಿಗೆ ಕಾರಣೀಕರ್ತರಾದ ಬಿಜೆಪಿ ಕಾರ್ಯಕರ್ತರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದ್ದಾರೆ.

loading...

LEAVE A REPLY

Please enter your comment!
Please enter your name here