ಸರಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ: ಅಶೋಕ ಪಟ್ಟಣ

0
24
loading...

ರಾಮದುರ್ಗ 21: ಗ್ರಾ.ಪಂ ಸದಸ್ಯರು ಹಾಗೂ ಪಂಚಾಯತ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಸರಕಾರದ ಯೋಜನೆಗಳು ಸಕಾಲಕ್ಕೆ ಸಾರ್ವಜನಿಕರಿಗೆ ತಲುಪವುಂತೆ ನೋಡಿಕೊಳ್ಳಬೇಕು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಚನ್ನಟ್ಟಿ ಹಾಗೂ ಕಾಮನಕೊಪ್ಪ ಗ್ರಾಮಗಳಿಗೆ ಕುಡಿಯುವ ನೀರೋದಗಿಸಲು ಕೊರೆಯಲಾದ ಕೊಳವೆ ಬಾವಿಯಿಂದ ಕುಡಿಯುವ ನೀರು ಸರಬರಾಜಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬರಗಾಲದಿಂದ ಕುಡಿಯುವ ನೀರಿಲ್ಲದೆ ಪಕ್ಷಿ ಸಂಕುಲ ಅಳಿವಿನಂಚು ತಲುಪುತ್ತಿವೆ. ನಾಗರಿಕರು ತಮ್ಮ ಮನೆಯ ಮೇಲ್ಚಾವಣಿ ಮೇಲೆ ಪಕ್ಷಿಗಳಿಗೆ ಕುಡಿಯಲು ನೀರಿಡುವಂತ ವ್ಯವಸ್ಥೆ ಮಾಡುವ ಮೂಲಕ ಪ್ರಾಣಿ ಪಕ್ಷಿಗಳ ಬಗೆಗೆ ಪ್ರೀತಿ ಹೊಂದಬೇಕು ಎಂದು ತಿಳಿಸಿದರು.
ಜಿ.ಪಂ ಸದಸ್ಯ ರಮೇಶ ದೇಶಪಾಂಡೆ ಮಾತನಾಡಿ, ಸತತ ಮೂರ್ನಾಲ್ಕು ವರ್ಷಗಳಿಂದ ಭೀಕರ ಬರಗಾಲ ಆವರಿಸಿ ಅಂತರ್ಜಲ ಮಟ್ಟ ಗಣನೀಯವಾಗಿ ಇಳಿಮುಖಗೊಂಡಿದೆ. ಆದ್ದರಿಂದ ಸಾರ್ವಜನಿಕರು ನೈಸರ್ಗಿಕ ಸಂಪತ್ತುಗಳನ್ನು ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.
ಜಿ.ಪಂ ಸದಸ್ಯ ಕೃಷ್ಣಾ ಲಮಾಣಿ, ತಾ.ಪಂ ಸದಸ್ಯ ಸದಾಶಿವ ತಳವಾರ, ಗ್ರಾ.ಪಂ ಅಧ್ಯಕ್ಷ ಗಡದಾರ, ರುದ್ರ್ರಗೌಡ ಪಾಟೀಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್.ಮೆಳವಂಕಿ, ಗ್ರಾಮದ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here