ಅತಿಕ್ರಮಣದಾರರ ಅರ್ಜಿ ಇಲ್ಲದ ನೆಪ ಹೇಳಿ ತಿರಸ್ಕರಿಸುವುದು ಸರಿಯಲ್ಲ..

0
28
loading...


ಭಟ್ಕಳ : ತಾಲ್ಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ವಾಸಿಸುತ್ತಿರುವ 10 ಸಾವಿರಕ್ಕೂ ಅಧಿಕ ಅತಿಕ್ರಮಣದಾರರು ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಇಲ್ಲದ ನೆಪ ಹೇಳಿ ಅರ್ಜಿಯನ್ನು ತಿರಸ್ಕರಿಸಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲಿ ಅತಿಕ್ರಮಣದಾರರಿಗೆ ಪಟ್ಟಾ ನೀಡಿ ನ್ಯಾಯ ದೊರಕಿಸಿಕೊಡಬೇಕು ಎಂದು ಅತಿಕ್ರಮಣದಾರರರ ಹೋರಾಟ ಸಮಿತಿಯ ಅಧ್ಯಕ್ಷ ರಾಮಾ ಎಂ. ಮೊಗೇರ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಭಟ್ಕಳ ಸೇರಿದಂತೆ ಜಿಲ್ಲೆಯಲ್ಲಿ ಬಡ ಅತಿಕ್ರಮಣದಾರರು ಅನೇಕ ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಮನೆ, ತೋಟ, ಬಾವಿ ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇವರ ಬಳಿ ಮನೆ ಟ್ಯಾಕ್ಸ, ಕರೆಂಟ್ ಬಿಲ್ ಮತ್ತಿತರ ದಾಖಲೆಗಳೂ ಇವೆ. ಇವರು ಎರಡು ಮೂರು ವರ್ಷಗಳ ಹಿಂದೆಯೇ ತಮ್ಮ ಭೂಮಿಯ ಸಕ್ರಮಕ್ಕಾಗಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅತಿಕ್ರಮಣ ಮಾಡಲಾದ ಅರಣ್ಯ ಭೂಮಿಗಳನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಅರಣ್ಯ ಹಕ್ಕು ಸಮಿತಿಯವರು ಪರಿಶೀಲನೆ ನಡೆಸಿ ಜಿಪಿಎಸ್ ಸರ್ವೆ ಕೂಡ ಮಾಡಿದ್ದಾರೆ. ತಾಲ್ಲೂಕಿನಲ್ಲಿ ಶೇ. 60 ರಷ್ಟು ಅತಿಕ್ರಮಣದಾರರ ಜಾಗವನ್ನು ಪರಿಶೀಲನೆ ನಡೆಸಿ ಜಿಪಿಎಸ್ ಸರ್ವೆ ಮಾಡಿ ನಕಾಶೆ ಮಾಡಿ ಗ್ರಾಮ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದರೂ ಕೂಡ ಪಟ್ಟಾ ನೀಡಲು ಅಧಿಕಾರಿಗಳು ಒಂದಲ್ಲದೊಂದು ನೆಪ ಹೇಳಿ ಅರ್ಜಿಯನ್ನು ತಿರಸ್ಕøತಗೊಳಿಸುತ್ತಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಹಿಡುವಳಿದಾರರಿರುವ ಕಾರಣ ತಿರಸ್ಕøತಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ ಅರಣ್ಯ ಹಕ್ಕು ಕಾಯ್ದೆಯಲ್ಲಿ ಅತಿಕ್ರಮಣದಾರರಿಗೆ ಬೇರೆ ಜಾಗವಿದ್ದಲ್ಲಿ ಪಟ್ಟಾ ನೀಡಲು ಬರುವುದಿಲ್ಲ ಎಂದು ಎಲ್ಲಿಯೂ ತಿಳಿಸಿಲ್ಲ ಎಂದ ಅವರು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಅತಿಕ್ರಮಣದಾರರ ಅರ್ಜಿಗಳನ್ನು ಇಲ್ಲದ ಸಬೂಬು ಹೇಳಿ ತಿರಸ್ಕøತಗೊಳಿಸಲಾಗುತ್ತಿದೆ. ಅಧಿಕಾರಿಗಳು ಕಾಯ್ದೆಗೆ ವ್ಯತಿರಿಕ್ತವಾಗಿ ಅತಿಕ್ರಮಣದಾರರ ಅರ್ಜಿಗಳನ್ನು ತಿರಸ್ಕøತ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಅತಿಕ್ರಮಣದಾರರು ಕಳೆದ ಹಲವು ವರ್ಷಗಳಿಂದ ತಮ್ಮ ಭೂಮಿ ಸಕ್ರಮವಾಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಇದರಿಂದಾಗಿಯೇ ಅವರು ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸುವಾಗ ಜಾಗಕ್ಕೆ ಸಂಬಂಧಿಸಿದ ದಾಖಲೆಗಳು, ಹಿರಿಯರ ಹೇಳಿಕೆ ಪತ್ರ ಸೇರಿದಂತೆ ಹಲವು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದಾರೆ. ಅತಿಕ್ರಮಣದಾರರಿಗೆ ಪಟ್ಟಾ ನೀಡುವಲ್ಲಿ ಅರಣ್ಯ ಹಕ್ಕು ಸಮಿತಿಯ ತೀರ್ಮಾನವೇ ಸುಪ್ರೀಂ ಆಗಿದ್ದರೂ ಕೂಡ ಅಧಿಕಾರಿಗಳು ಇದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ತಮ್ಮದೇ ಆದ ಕಾರಣ ನೀಡಿ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು ಸರಿಯಲ್ಲ. ಭಟ್ಕಳದ ಅತಿಕ್ರಮಣದಾರರ ಸಮಸ್ಯೆ ಬಗ್ಗೆ ಹಾಗೂ ಪಟ್ಟಾ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆಯವರ ಗಮನಕ್ಕೆ ತರಲಾಗುವುದು ಎಂದ ಅವರು ಅತಿಕ್ರಮಣದಾರರಿಗೆ ನ್ಯಾಯ ಒದಗಿಸಲು ತಮ್ಮ ಸಮಿತಿಯಿಂದ ಹೋರಾಟ ಮುಂದುವರಿಯಲಿದೆ ಎಂದೂ ಅವರು ಹೇಳಿದರು.

loading...

LEAVE A REPLY

Please enter your comment!
Please enter your name here