ಕಾಂಗ್ರೆಸ್ ಕಾರ್ಯದರ್ಶಿಯಾಗಿ ತಹಶಿಲ್ದಾರ ನೇಮಕ

0
24
loading...

ಬೆಳಗಾವಿ 13: ಕೆ.ಪಿ.ಸಿ.ಸಿ. ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರ ಶಿಫಾರಸ್ಸಿನ ಮೇರೆಗೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ಅಶ್ಪಾಕ ತಹಶಿಲ್ದಾರ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಆದೇಶ ಹೊರಡಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳಕರ ಹಾಗೂ ಬುಡಾ ಅಧ್ಯಕ್ಷ ಯುವರಾಜ ಕದಮ್ ಅವರ ಸಮ್ಮುಖದಲ್ಲಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ನೇಮಕಾತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ. ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಬಿ.ಜೆ.ಪಿ. ನಾಯಕರು ಕಾಂಗ್ರೆಸ್ ಮುಕ್ತ ಕರ್ನಾಟಕದ ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸರಕಾರ ರಾಜ್ಯದಲ್ಲಿ ಸರ್ವ ಸಮಾಜಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದಲ್ಲಿ ಜನಪರ ಆಡಳಿತ ನಡೆಸುತ್ತಿದ್ದು ಬಿ.ಜೆ.ಪಿ. ನಾಯಕರ ಬೊಗಳಿಕೆಯಿಂದ ಕಾಂಗ್ರೆಸ್ ಸಾಮ್ರಾಜ್ಯಕ್ಕೆ ಧಕ್ಕೆ ಯಾಗುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿನಯ ನಾವಲಗಟ್ಟಿ ಮಾತನಾಡಿ ಬೆಳಗಾವಿ ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂಬುವುದು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಸಾಬಿತಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗ್ರಾಮಮಟ್ಟದಲ್ಲಿ ಇನ್ನಷ್ಟು ಬಲಿಷ್ಠಗೊಳಿಸಲು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ವಿವಿಧ ಸಮಾಜದ ಜನಪರ ಕಾಳಜಿಯುಳ್ಳ ನಾಯಕರನ್ನು ಸಂಘಟನೆಗಾಗಿ ನಿಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here