ವಿಶ್ವ ಕಾರ್ಮಿಕ ದಿನ ಆಚರಣೆ

0
58
loading...

ಕಾರವಾರ : ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾ ನ್ಯಾಯವಾದಿಗಳ ಸಂಘ, ಯುನಿಟಿ ಇನ್‍ಪ್ರಾ ಪ್ರಾಜೆಕ್ಟ್ ಪ್ರೈ.ಲಿ.ನ ಸಂಯುಕ್ತ ಆಶ್ರಯದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಆವರಣ ಕಾರವಾರದಲ್ಲಿ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಕಾನೂನು ಅರಿವು ಹಾಗೂ ಫಲಾನುಭವಿಗಳ ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ದೇವೇಂದ್ರ ಪಂಡಿತ ಅವರು ಉದ್ಘಾಟಿಸಿದರು. ಯುನಿಟಿ ಇನ್‍ಪ್ರಾ ಪ್ರಾಜೆಕ್ಟ್ ಪ್ರೈ.ಲಿಪ್ರಾಜೆಕ್ಟ್ ಮ್ಯಾನೇಜರ್ ಚಂದ್ರಶೇಖರ ಕುಮಟೆಕರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗುರ ಪಾಲ್ಗೊಂಡಿದ್ದರು. ವಿಶ್ವ ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ನೋಂದಣಿ, ನವೀಕರಣ ಹಾಗೂ ಸೌಲಭ್ಯಗಳ ಬಗ್ಗೆ, ಖಾಸಗಿ ವಾಣಿಜ್ಯ ವಾಹನ ಚಾಲಕರ ನೋಂದಣಾ ಸೌವಲತ್ತುಗಳ ಬಗ್ಗೆ ಹಾಗೂ ಕಾರ್ಮಿಕ ಇಲಾಖೆಯಿಂದ ಸಿಗುವ ಇತರೇ ಸೌಲಭ್ಯಗಳ ಬಗ್ಗೆ ಕಾರ್ಮಿಕರಿಗೆ ಮಾಹಿತಿ ನೀಡಲಾಯಿತು.

loading...

LEAVE A REPLY

Please enter your comment!
Please enter your name here