ಬಿಜೆಪಿ ಅಭ್ಯರ್ಥಿ ನಾಗರಾಜ ಅವರ ಪರವಾಗಿ ಶಾಸಕ ಹೆಗೆಡೆ ಮತಯಾಚನೆ

0
20
loading...

ಹೊನ್ನಾವರ : ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೋ. ಮಾ. ನಾಗರಾಜ ಸಮರ್ಥ ಅಭ್ಯರ್ಥಿಯಾಗಿದ್ದು ಪ್ರಥಮ ಪ್ರಾಶಸ್ತ್ಯದ ಮತವನ್ನು ಅವರಿಗೆ ನೀಡಿ ಆಯ್ಕೆ ಮಾಡಬೇಕು ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಕೋರಿದರು.
ತಾಲೂಕಿನ ಹಳದೀಪುರ, ಕಡತೋಕಾ. ಅರೆಅಂಗಡಿ ಮತ್ತಿರ ಭಾಗಗಳಲ್ಲಿ ಮಂಗಳವಾರ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೋ. ಮಾ. ನಾಗರಾಜ ಪರ ಪ್ರಚಾರ ನಡೆಸಿ ನಂತರ ಹೊದಿಕೆ ಶಿರೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ಆಡಳಿತ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಪೂರ್ಣ ಬೆಂಬಲ ನೀಡಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ದಿ ದೃಷ್ಠಿಯಿಂದ ಹಲವಾರು ಯೋಜನೆಗಳನ್ನು ತಂದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ ಎಂದರು.
ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್ ಮುಖ್ಯ ಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಬೆಂಬಲ ನೀಡಿದ್ದಾರೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣಕ್ಕೆ 4000 ಕೋಟಿ ರೂ. ಅನುದಾನ ನೀಡಿದ್ದರು ಎಂದರು
ತಾನು ಶಿಕ್ಷಣ ಸಚಿವನಾಗಿದ್ದಾಗ ಶಿಕ್ಷಣ ಕ್ಷೇತ್ರದ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. 2000 ಕ್ಕಿಂತ ಹೆಚ್ಚು ಖಾಸಗೀ ಶಿಕ್ಷಣ ಸಮಸ್ಥೆಗಳನ್ನು ಅನುದಾನ ಕ್ಕೊಳಪಡಿಸಿದ್ದೇನೆ. 4000 ಜೆಒಸಿ ಶಿಕ್ಷಕರ ಸಮಸ್ಯೆ ಬಗೆಹರಿಸಿದ್ದೇನೆ. ಹೊಸ ಶಿಕ್ಷಕರ ನೇಮಕಾತಿಯಲ್ಲಿ ಹಾಗೂ ಆಡಳಿತಾತ್ಮಕವಾಗಿ ಸಾಕಷ್ಟು ಬೆಂಬಲಿಸಿದ್ದೇನೆ ಎಂದರು.
ಬಸವರಾಜ ಹೊರಟ್ಟಿಯವರು ಸಮಸ್ಯೆಗಳನ್ನು ಜೀವಂತವಾಗಿಟ್ಟುಕೊಂಡು ಹೋರಾಟ ಮಾಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ ಆಗಿದೆ. ಶಿಕ್ಷಕರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರೋ. ಮಾ. ನಾಗರಾಜ ಸಮರ್ಥ ಅಭ್ಯರ್ಥಿ ಎಂದು ಹೇಳಿದರು.
ವೇದಿಕೆಯಲ್ಲಿ ಬಿಜೆಪಿ ಹೊನ್ನಾವರ ಮಂಡಲ ಅಧ್ಯಕ್ಷ ವಿನೋದ ನಾಯ್ಕ ರಾಯಲಕೇರಿ, ಬಿಜೆಪಿ ಮುಖಂಡರಾದ ಡಾ. ಜಿ. ಜಿ. ಹೆಗಡೆ, ಉಮೇಶ ನಾಯ್ಕ, ಗಾಯತ್ರಿ ಗೌಡ, ಸೂರಜ್ ನಾಯ್ಕ ಸೋನಿ, ಎಂ.ಎಸ್. ಹೆಗಡೆ ಕಣ್ಣಿಮನೆ, ಡಿ.ಎನ್. ನಾಯ್ಕ, ಗಣೇಶ ಪೈ, ಸುರೇಶ ಭಟ್ ಕಡತೋಕಾ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ಇದೆ 7 ಹೆಚ್ ಎನ್ ಆರ್ 1: ಹೊದಿಕೆ ಶಿರೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪ್ರೋ. ಮಾ. ನಾಗರಾಜ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಮಾತನಾಡಿದರು.

loading...

LEAVE A REPLY

Please enter your comment!
Please enter your name here