ಸಾಂಕ್ರಾಮಿಕ ರೋಗ ನಿಯಂತ್ರಣ ಎಲ್ಲರ ಜವಾಬ್ದಾರಿ: ಮನೋಹರ

0
27
loading...

ಕಾರವಾರ : ಜಿಲ್ಲಾ ಆರೋಗ್ಯ ಇಲಾಖೆಯು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿತು.
ಈ ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಡಾ: ರಾಮ ಪ್ರಸಾತ್ ಮನೋಹರ ರವರು ಪಾಲ್ಗೊಂಡು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಕೂಡ ಕೈಜೋಡಿಸಿ ಸಹಕರಿಸಬೇಕಾಗುತ್ತದೆ ಎಂದು ಹೇಳಿದರು.
ಮತ್ತು ಮುಂದಿನ ವಾರದಲ್ಲಿ ವಿಶೇಷ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ಕೂಡ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪೂರಕವಾಗಿದೆ ಎಂದರು.
ಅಂಗನವಾಡಿ ಕೇಂದ್ರ ಶಾಲೆ, ಹಾಸ್ಟೇಲ್‍ಗಳಲ್ಲಿ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸಿ ನೀರನ್ನು ಬಳಸಬೇಕು. ಶೌಚಾಲಯದ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಹಾಗೂ ನೀರನ್ನು ಬಿಸಿ ಮಾಡಿ ಕುಡಿಯುವಂತೆ ಜಾಗೃತಿ ಮೂಡಿಸುವುದರ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಮೊಗೇರ ಹಾಗೂ ಉಪಾಧ್ಯಕ್ಷರಾದ ಸಂತೋಷ ರೇಣಕೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here