ಧಾರ್ಮಿಕ ಆಚಾರಣೆಯಿಂದ ಶಾಂತಿ ನೆಲೆಸಲು ಸಾಧ್ಯ

0
24
loading...

ಚನ್ನಮ್ಮ ಕಿತ್ತೂರು 11: ಸಾಮೂಹಿಕ ಧಾರ್ಮಿಕ ಆಚರಣೆಗಳಿಂದ ಮಾತ್ರ ಮನುಷ್ಯನ ಬದುಕಿನಲ್ಲಿ ಶಾಂತಿ ನೆಮ್ಮದಿ ನೆಲೆಸಿ ಸಮಾಜ ಒಗ್ಗೂಡಲು ಸಾಧ್ಯವೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ಎನ್ ಜಯಶಂಕರ ಶರ್ಮಾ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಲ್ಲಿಯ ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಆಯೋಜಿಸಿದ್ದ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧರ್ಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಾಮಾಜಿಕ ಬದುಕಿನಲ್ಲಿ ಧಾರ್ಮಿಕ ಮೌಲ್ಯಗಳನ್ನು ರೂಢಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಹಕರಿಸಬೇಕು. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜಿಲ್ಲೆಯಲ್ಲಿ ಧಾರ್ಮಿಕ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ವಿಶೇಷವಾಗಿ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಆದ್ಯತೆ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ 30 ಸಾವಿರ ಸ್ವಸಹಾಯ ಸಂಘಗಳಿದ್ದು, 500 ಕೋಟಿ ವಹಿವಾಟು ನಡೆದಿದೆ ಎಂದು ಹೇಳಿದರು.
ಸಾನಿಧ್ಯವಹಿಸಿದ್ದ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ತಮ್ಮ ಉನ್ನತ ವಿಚಾರಗಳಿಂದ ಸರಕಾರವನ್ನೂ ಮೀರಿಸುವಂತಹ ಸಾಮಾಜಿಕ ಕಳಕಳಿ ಹೊಂದಿರುವ ಡಾ. ವಿರೇಂದ್ರ ಹೆಗ್ಗಡೆ ಅವರು ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಅದನ್ನು ಸಾಕಾರಗೊಳಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದ್ದು, ಇಂತಹ ಸಾಮೂಹಿಕ ಪೂಜೆ ಪ್ರಾರ್ಥನೆಗಳಿಂದ ನಾಡಿಗೆ ಒಳಿತಾಗಲು ಸಾಧ್ಯವೆಂದು ಹೇಳಿದರು
ಈ ಕಾರ್ಯಕ್ರಮದ ಅಧ್ಯಕ್ಷ ಬಸವರಾಜ ಕುಪ್ಪಸಗೌಡರ ಮಾತನಾಡಿ, ಮನುಷ್ಯನಾಗಿ ಹುಟ್ಟಿದ ಮೇಲೆ ಒಂದಿಲ್ಲವೊಂದು ಧಾರ್ಮಿಕ ಆಚರಣೆಯಲ್ಲಿ ತನ್ನನ್ನು ತೊಡಗಿಸಿಕೊಂಡು ತಮ್ಮ ದುಡಿಮೆಯಲ್ಲಿ ಸ್ವಲ್ಪ ಹಣವನ್ನಾದರೂ ಸಮಾಜ ಮತ್ತು ಧರ್ಮಕ್ಕಾಗಿ ಮಿಸಲಿಡಬೇಕು. ಅದರಿಂದ ಮಾನಸಿಕ ನೆಮ್ಮದಿ ದೊರೆತು ಬದುಕು ಸಾರ್ಥಕಗೊಳ್ಳುತ್ತದೆ ಎಂದು ಹೇಳಿದರು.
ನಿವೃತ್ತ ಶಿಕ್ಷಕಿ ಅನ್ನಪೂರ್ಣ ಹೊಸಪೇಟೆ, ರಾಜೇಶ್ವರಿ ಪಾಟೀಲ ಮಾತನಾಡಿದರು. ನಿರ್ದೇಶಕರಾದ ಸುರೇಶ ಮೊೈಲಿ, ನಾಗರಾಜ ನಾಯ್ಕ, ನಾಗಕೃಷ್ಣ ಶರ್ಮಾ, ವಿಕ್ರಮಾಚಾರ್ಯ ಗಡಗಿ, ಯಲ್ಲಪ್ಪ ಕಡಕೋಳ, ಕಾವ್ಯಾ ಕುಪ್ಪಸಗೌಡರ ಮುಂತಾದವರು ಭಾಗವಹಿಸಿದ್ದರು. ನಾಗರಾಜ ಸ್ವಾಗತಿಸಿದರು. ಭೀಮಾ ಮತ್ತು ವಿಜಯಲಕ್ಷ್ಮೀ ನಿರೂಪಿಸಿದರು. ಶಾರದಾ ಹಡಪದ ವಂದಿಸಿದರು.

loading...

LEAVE A REPLY

Please enter your comment!
Please enter your name here