ಬಿಜೆಪಿ ಅಧ್ಯಕ್ಷರ ವರ್ತನೆ ಖಂಡಿಸಿ ಮುಖಂಡರಿಗೆ ದೂರು

0
21
loading...

ಖಾನಾಪುರ 30: ತಾಲೂಕಿನ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಠ್ಠಲ ಪಾಟೀಲ ಅವರನ್ನು ಆಯ್ಕೆ ಮಾಡಿದ ಪಕ್ಷದ ಜಿಲ್ಲಾಧ್ಯಕ್ಷ ಡಾ.ವಿ ಐ ಪಾಟೀಲ ಅವರ ತೀರ್ಮಾನವನ್ನು ಖಂಡಿಸಿ ತಾಲೂಕಿನ ಪಕ್ಷದ ಕಾರ್ಯಕರ್ತರಾದ ಸಂಜಯ ಕುಬಲ, ವಸಂತ ದೇಸಾಯಿ, ಕಿರಣ ಯಳ್ಳೂರಕರ ರಾಜ್ಯ ಘಟಕಕ್ಕೆ ದೂರು ಸಲ್ಲಿಸಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಳೆಯ ಕಾರ್ಯಕರ್ತರನ್ನು ಕಡೆಗಣಿಸಿ ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾದ ವಿಠ್ಠಲ ಪಾಟೀಲ ಅವರನ್ನು ನೇಮಕಮಾಡಿದ್ದು, ಇದರಿಂದ ತಮಗೆ ಅನ್ಯಾಯವಾಗಿದೆ ಎಂದು ಅವರು ದೂರಿದ್ದಾರೆ.
ಪಕ್ಷದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ ವಿಠ್ಠಲ ಪಾಟೀಲ ಮುಂದಿನ ಸೂಚನೆಯವರೆಗೆ ಯಾವುದೇ ಸಭೆ ಸಮಾರಂಭ ಆಯೋಜಿಸಬಾರದು, ಸತ್ಕಾರ ಸಮಾರಂಭಗಳಲ್ಲಿ ಭಾಗವಹಿಸಬಾರದು ಮತ್ತು ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಪಕ್ಷದ ಹಿರಿಯ ಧುರೀಣರು ಸೂಚಿಸಿದ್ದಾರೆ. ಆದರೆ ವಿಠ್ಠಲ ಪಾಟೀಲ ಸಹಕಾರ ಸಂಘವೊಂದು ಆಯೋಜಿಸಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಹಿರಿಯರ ಸೂಚನೆಯನ್ನು ಪಾಲಿಸಿಲ್ಲ ಎಂದು ದೂರಿನಲ್ಲಿ ಕಾರ್ಯಕರ್ತರು ವಿವರಿಸಿದ್ದಾರೆ.

loading...

LEAVE A REPLY

Please enter your comment!
Please enter your name here