ಬೀಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಅಭಿಯಾನ

0
20
loading...

ಖಾನಾಪುರ: ತಾಲೂಕಿನ ಬೀಡಿ ಗ್ರಾಮದ ಪ್ರಾಥಮಿಕ ಕೇಂದ್ರದ ಆವರಣದಲ್ಲಿ ಬೀಡಿ ಗ್ರಾಮ ಪಂಚಾಯ್ತಿ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಸಾಂಕ್ರಾಮಿಕ ರೋಗಗಳ ಹತೋಟಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಬೀಡಿ ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ಹಡಪದ ಉದ್ಘಾಟಿಸಿದರು. ಆರೋಗ್ಯ ಕೇಂದ್ರದ ವೈದ್ಯ ಡಾ.ಸಂಜೀವ ಬಾವಚಿ ಸ್ವಚ್ಛತೆಯ ಮಹತ್ವ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಕುರಿತು ಉಪನ್ಯಾಸ ನೀಡಿದರು. ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆರೋಗ್ಯ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ರೇಣುಕಾ ಕೋಲಕಾರ, ಅಕ್ತರಭಾನು ತಿಗಡಿ, ಸಂತೋಷ ಹಡಪದ, ಮಲ್ಲಿಕಾರ್ಜುನ ಮುತಗೇಕರ ಸೇರಿದಂತೆ ಬೀಡಿ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

loading...

LEAVE A REPLY

Please enter your comment!
Please enter your name here