ಬಿಜೆಪಿ ಯುವ ಮೋರ್ಚಾ ಘಟಕದ ಪದಾಧಿಕಾರಿಗಳು ಪ್ರತಿಭತಿಟನೆ

0
19
loading...

ಬೈಲಹೊಂಗಲ: ಬೆಂಗಳೂರಿನ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಭಾರತೀಯ ಸೇನೆ ವಿರುದ್ದ ಘೊಷಣೆ ಕೂಗಿರುವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ, ಬಿಜೆಪಿ ಯುವ ಮೋರ್ಚಾ ಘಟಕದ ಪದಾಧಿಕಾರಿಗಳು ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದರು.
ರಾಯಣ್ಣ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ರಸ್ತೆ ತಡೆದು ರಾಜ್ಯ ಸರ್ಕಾರ ವಿರುದ್ದ ದಿಕ್ಕಾರ ಕೂಗಿದರು. ದೇಶ ದ್ರೋಹಿ ಘೋಷಣೆ ಕೂಗಿದವರನ್ನು ರಕ್ಷಣೆ ಮಾಡುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರದ ವೈಖರಿಯನ್ನು ಖಂಡಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಮಡಿವಾಳಪ್ಪ ಹೋಟಿ ಮಾತನಾಡಿ, ‘ಭಾರತೀಯ ಸೇನೆಯ ವಿರುದ್ದ ಘೊಷಣೆ ಕೂಗಿದವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಗಡಿ ಪಾರು ಮಾಡಬೇಕು. ಅದನ್ನು ಬಿಟ್ಟು ಸರ್ಕಾರದಲ್ಲಿರುವ ಸಚಿವರು ಅವರ ಬೆನ್ನಿಗೆ ನಿಂತಿರುವದು ವಿಷಾದದ ಸಂಗತಿಯಾಗಿದೆ. ಕೂಡಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ದೇಶದ್ರೋಹ ಎಸಗಿದವರ ವಿರುದ್ದ ಪ್ರತಿಭಟನೆಗೆ ಇಳಿದಿದ್ದ ವಿದ್ಯಾರ್ಥಿ ಮುಖಂಡ, ವಿದ್ಯಾರ್ಥಿಗಳ ಮೇಲೆ ಪೊಲೀಸ ಇಲಾಖೆ ಲಾಠಿ ಚಾರ್ಜ ಮಾಡಿ, ಬಂಧಿಸಿರುವ ಕ್ರಮ ತಿವೃ ಖಂಡನೀಯವಾಗಿದೆ. ಬಿಜೆಪಿ ಕಾರ್ಯಕರ್ತರು ರಾಜ್ಯಾದಾಂತ್ಯ ಬೀದಿಗಿಳಿದು ಹೋರಾಟ ಮಾಡುವ ಮುನ್ನವೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಎಬಿವಿಪಿ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕೆಂದರು.
ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಬಸನಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಯಡಳ್ಳಿ, ತಾಲೂಕು ಪ್ರಧಾನ ಕಾರ್ಯದರ್ಶಿ ವಿರೇಶ ಹೊಳೆಪ್ಪನವರ, ಯುವ ಮೋರ್ಚಾ ಉಪಾಧ್ಯಕ್ಷ ನಾಗರಾಜ ಗುಂಡ್ಲೂರ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಬಸವರಾಜ ನೇಸರಗಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಶ್ರೀಕಾಂತ ಶಿರಹಟ್ಟಿ, ಮುಖಂಡ ಮಲ್ಲಿಕಾರ್ಜುನ ವಕ್ಕುಂದಮಠ, ಮುರಗೇಶ ಗುಂಡ್ಲೂರ, ರಾಜು ನರಸನ್ನವರ, ಸೋಮು ಬೋರಕನವರ, ರಿತೇಶ ಪಾಟೀಲ, ಆದರ್ಶ ಗುಂಡಗವಿ, ಕುಮಾರ ತುಪ್ಪದ ಮುಂತಾದವರು ಇದ್ದರು.

loading...

LEAVE A REPLY

Please enter your comment!
Please enter your name here