ರಸ್ತೆ ಕಾಮಗಾರಿಗೆ ಸಚಿವ ರಮೇಶ ಜಾರಕಿಹೊಳಿ ಚಾಲನೆ

0
30
loading...

ಗೋಕಾಕ 24 : ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಅಂಕಲಗಿಯಿಂದ ಮಮದಾಪೂರ ಕ್ರಾಸ್‍ವರೆಗೆ 12 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ.ಆರ್ ಕಾಗಲ್, ಮಡ್ಡೆಪ್ಪ ತೋಳಿನವರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವಾನಂದ ಡೋಣಿ, ಭೀಮಗೌಡ ಪೊಲೀಸ್‍ಗೌಡರ, ರಾಜು ತಳವಾರ, ಅಡಿವೆಪ್ಪ ಪಟ್ಟಣಶೆಟ್ಟಿ, ನಿಂಗಪ್ಪ ಡೋಣಿ, ಬಸಪ್ಪ ಉರಬಿನಟ್ಟಿ, ಬಸವರಾಜ ಪಟ್ಟಣಶೆಟ್ಟಿ, ಸುರೇಶ ಪಟ್ಟಣಶೆಟ್ಟಿ, ಚಂದ್ರಪ್ಪ ಭುಸನ್ನವರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ಎ.ಬಿ.ಹೊನ್ನಾವರ, ಸಹಾಯಕ ಅಭಿಯಂತ ಹಿರೇಮಠ, ಗುತ್ತಿಗೆದಾರ ಬಸವಂತ ದಾಸನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here