ಕಾವೇರಿ ಕುರಿತು ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಬೆಂಬಲ: ಜೋಶಿ

0
21
loading...

ಹುಬ್ಬಳ್ಳಿ: ಕಾವೇರಿ ಕುರಿತು ರಾಜ್ಯ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬಿಜೆಪಿ ಬೆಂಬಲವಿದೆ ಎಂದು ಸಂಸದ ಪ್ರಹ್ಲಾದ ಜೋಶಿ ನಿನ್ನೆ ತಿಳಿಸಿದ್ದಾರೆ. ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಕುರಿತು ಸುಪ್ರೀಂಕೋರ್ಟ್ ಆದೇಶದಿಂದ ರಾಜ್ಯಕ್ಕೆ ಘನಘೋರ ಅನ್ಯಾಯವಾಗಿದೆ. ಎಂದು ತಿಳಿಸಿದರು. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕನ್ನಡಿಗರ ಹಾಗೂ ತಮಿಳರು ಸುರಕ್ಷಿತವಾಗಿರಬೇಕು. ಈ ಕುರಿತು ಎರಡು ರಾಜ್ಯದ ಮುಖ್ಯಮಂತ್ರಿಗಳು ಸೂಕ್ತ ಕ್ರಮಕೈಗೊಳ್ಳಬೇಕಿದೆ.ಗಲಭೆ ತಡೆಯವು ವಿಷಯದಲ್ಲಿ ಪೂರ್ವ ತಯಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲಾವಾಗಿದೆ ಎಂದು ತಿಳಿಸಿದರು. ಕಾವೇರಿ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡಲೇ ಸರ್ವ ಪಕ್ಷಗಳ ಸಭೆ ಕರೆಯಬೇಕು ಹಾಗೂ ಅಧಿವೇಶನ ನಡೆಸಿ ಮುಂದಿನ ಕ್ರಮದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜೋಶಿ ಒತ್ತಾಯಿಸಿದರು.

loading...

LEAVE A REPLY

Please enter your comment!
Please enter your name here