ರಾಜ್ಯ ಮಟ್ಟಕ್ಕೆ ಆಯ್ಕೆ

0
8
loading...

ಗೋಕಾಕ 29: ಸಾರ್ವಜನಿಕ ಶಿಕ್ಷಣ ಇಲಾಖೆಯವರು ಅಥಣಿ ತಾಲೂಕಿನ ಉಗಾರ ಖುರ್ದದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಶಾಲಾ ವಿದ್ಯಾರ್ಥಿಗಳು ಸೆಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಹಾಗೂ ನಿಪ್ಪಾಣಿಯಲ್ಲಿ ನಡೆದ ಕರಾಟೆಯಲ್ಲಿ ಅದೇ ಶಾಲೆಯ ಸ್ಪಂದನಾ ಶೇಖರಗೋಳ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಡಾ. ಭೀಮಶಿ ಜಾರಕಿಹೊಳಿ, ಆಡಳಿತಾಧಿಕಾರಿ ಎಸ್.ಜಿ.ಬೆಟಗಾರ, ಮುಖ್ಯೋಪಾಧ್ಯಾಯರುಗಳಾದ ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ್, ಪಿ.ವಿ.ಚಚಡಿ, ದೈಹಿಕ ಶಿಕ್ಷಕರಾದ ಎಸ್.ಕೆ.ಹುಲ್ಯಾಳ, ಎಸ್.ಬಿ.ಪಡನಾಡಿ ಹಾಗೂ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

loading...

LEAVE A REPLY

Please enter your comment!
Please enter your name here