ಸಂಸದರಿಂದ ನಗರದ ರಸ್ತೆ ಕಾಮಗಾರಿಗಳ ಪರಿಶೀಲನೆ

0
16
loading...

ಹುಬ್ಬಳ್ಳಿ : ಇಲ್ಲಿಯ ಕೋರ್ಟ್ ವೃತ್ತ, ಕೇಶ್ವಾಪೂರದ ಸರ್ವೋದಯ ಸರ್ಕಲ್, ಸ್ಟೇಶನ್ ರಸ್ತೆ ಸೇರಿದಂತೆ ವಿವಿಧ ಕಡೆ ನಿನ್ನೆ ಸಂಸದ ಪ್ರಹ್ಲಾದ ಜೋಶಿ ನಗರವಿಡಿ ಸುತ್ತಿ ರಸ್ತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡದ ಪಾಲಿಕೆ ಅಧಿಕಾರಿಗಳನ್ನು ಸಂಸದ ಜೋಶಿ ತರಾಟೆಗೆ ತೆಗೆದುಕೊಂಡರು ಹಾಗೂ ರಸ್ತೆ ಕಾಮಗಾರಿಗಳನ್ನು ಸರಿಯಾಗಿ ಮಾಡುವಂತೆ ಅಧಿಕಾರಿಗಳಿಗೆ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಗೃಹ ಸಚಿವ ಡಾ. ಪರಮೇಶ್ವರರ ಮಧ್ಯ ಭಿನ್ನಾಭಿಪ್ರಾಯದಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಯುವ ರಾಜ ರಾಹುಲ ಗಾಂಧಿ ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಜಗಳವನ್ನು ಪರಿಹರಿಸಿ, ರಾಜ್ಯದಲ್ಲಿ ಕಾನೂನ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕೆಂದು ಜೋಶಿ ಒತ್ತಾಯಿಸಿದರು. ಕಾವೇರಿ ಕುರಿತು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು ಸುಪ್ರೀಂಕೋರ್ಟ್‍ನಲ್ಲಿ ಒಂದು ಸಾರಿ ವಾದ ಮಂಡಿಸುವಲ್ಲಿ ಎಡವಿದೆ ನಂತರ ಪದೇ ಪದೇ ಅದೇ ಪ್ರಕ್ರೀಯೆಯನ್ನು ಮುಂದುವರಿಸಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಹು-ಧಾ ಮಹಾನಗರ ಪಾಲಿಕೆ ಮಹಾಪೌರೆ ಮಂಜುಳಾ ಅಕ್ಕೂರ, ಉಪಮೇಯರ್ ಲಕ್ಷ್ಮೀ ಉಪ್ಪಾರ, ಪಾಲಿಕೆ ಸದಸ್ಯ ವೀರಣ್ಣ ಸವಡಿ, ಸುಧೀರ ಸರಾಫ್, ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here