ಕಾಮಗಾರಿ ಆದೇಶ ಪತ್ರ ವಿತರಣೆ

0
35
loading...

ಹಳಿಯಾಳ: ಅಂಬೇಡ್ಕರ ನಿವಾಸ ಹಾಗೂ ಬಸವ ವಸತಿ ಯೋಜನೆಯಡಿ 2015-16ನೇ ಸಾಲಿನ ವಸತಿ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮವು ಅ.26 ರಂದು ತಾಲೂಕ ಪಂಚಾಯತ ಸಭಾಭವನದಲ್ಲಿ ನೆರವೇರಿತು.
ಬೆಳವಟಗಿ, ಅಂಬೇವಾಡಿ, ಭಾಗವತಿ, ಮದ್ನಳ್ಳಿ, ಹವಗಿ ಹಾಗೂ ಮಂಗಳವಾಡ ಪಂಚಾಯತ ವ್ಯಾಪ್ತಿಯ ಒಟ್ಟು 86 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ನೀಡುವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ಮಾತನಾಡುತ್ತಾ ಸರ್ಕಾರವು ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡುತ್ತಿದೆ. ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕ ಪಂಚಾಯತ ಅಧ್ಯಕ್ಷೆ ರೀಟಾ ಫ್ರಾನ್ಸಿಸ್ ಸಿದ್ಧಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ನೀಲವ್ವಾ ಮೋಹನ ಮಡಿವಾಳ, ಸದಸ್ಯ ಬಾಳು ಪಾಟೀಲ, ಜಿಲ್ಲಾ ಪಂಚಾಯತ ಸದಸ್ಯ ಕೃಷ್ಣಾ ಪಾಟೀಲ, ಪುರಸಭೆ ಅಧ್ಯಕ್ಷ ಉಮೇಶ ಬೋಳಶೆಟ್ಟಿ ವೇದಿಕೆಯಲ್ಲಿದ್ದರು.
ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣರಾವ ಯಕ್ಕುಂಡಿ ಸ್ವಾಗತಿಸಿ ಫಲಾನುಭವಿಗಳಿಗೆ ತರಬೇತಿ ನೀಡಿದರು. ಮಂಗಳವಾಡ ಪಂಚಾಯತ ಅಭಿವೃದ್ಧಿ ಅಧಿಕಾರಿ ಕಾರ್ಯಕ್ರಮ ನಿರೂಪಿಸಿದರು.

loading...

LEAVE A REPLY

Please enter your comment!
Please enter your name here