ಜಿಲ್ಲೆಯಾದ್ಯಂತ ರೈತ ಸಮಾವೇಶ

0
13
loading...

ಕನ್ನಡಮ್ಮ ಸುದ್ದಿ-ಚಿಕ್ಕೋಡಿ
ಡಾ. ಸ್ವಾಮಿನಾಥನ್‌ ವರದಿ ಆಧಾರದ ಮೇಲೆ ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ, ರೈತರ ಸಾಲಮನ್ನಾ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಲು ಅ. 19ರಿಂದ ಜಿಲ್ಲೆಯಾದ್ಯಂತ ರೈತ ಸಮಾವೇಶ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ವಕ್ತಾರ ತ್ಯಾಗರಾಜ ಕದಮ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಹಸಿರು ಸೇನೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘದಿಂದ ಕಳೆದ ಸುಮಾರು 15 ತಿಂಗಳುಗಳಿಂದ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲಾಗುತ್ತಿದೆ. ಆದರೂ ಸರಕಾರ ಮತ್ತು ಜನಪ್ರತಿನಿಧಿಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸರಕಾರವನ್ನು ಕಣ್ಣು ತೆರೆಸುವ ನಿಟ್ಟಿನಲ್ಲಿ ರೈತ ಸಂಘ ಜಿಲ್ಲೆಯಲ್ಲಿ ಬೃಹತ್‌ ಸಮಾವೇಶಗಳನ್ನು ನಡೆಸುತ್ತಿದ್ದು, ಅ. 19 ರಂದು ಗೋಕಾಕ ತಾಲೂಕಿನ ಹಳ್ಳೂರ, 22 ರಂದು ಅಥಣಿ, 23 ರಂದು ಬೆಳಗ್ಗೆ ಖಾನಾಪೂರ ಮಧ್ಯಾಹ್ನ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ, 24 ರಂದು ರಾಯಬಾಗದಲ್ಲಿ ಜಿಲ್ಲಾ ಸಮಾವೇಶ ನಡೆಯಲಿದ್ದು, 25 ರಂದು ರಾಮದುರ್ಗದಲ್ಲಿ ಬೃಹತ್‌ ರೈತ ಸಮಾವೇಶ ನಡೆಯಲಿದೆ ಎಂದರು.
ಈ ಸಮಾವೇಶದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, ಬಸವರಾಜಪ್ಪ, ಬಸವರಾಜ ಮಳಲಿ, ಜಿಲ್ಲಾ ಅಧ್ಯಕ್ಷ ರಾಘವೇಂದ್ರ ನಾಯಿಕ, ಚುನಪ್ಪಾ ಪೂಜೇರಿ ಹಾಗೂ ಜಿಲ್ಲಾ ಹಾಗೂ ಎಲ್ಲ ತಾಲೂಕುಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಪ್ರಸಕ್ತ ಹಂಗಾಮಿನಲ್ಲಿ ಚಿಕ್ಕೋಡಿ, ಹುಕ್ಕೇರಿ, ರಾಯಬಾಗ, ಅಥಣಿ ತಾಲೂಕಿನಲ್ಲಿ ಮಳೆಯಾಗಿಲ್ಲ. ಆದರೂ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಹಾನಿಯಾಗಿರುವ ರೈತರ ಬೆಳೆಗೆ ಕೂಡಲೇ ಪರಿಹಾರ ಕೊಡಬೇಕು. ಸರಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಒತಾಯಿಸಿದರು.
ರೈತ ಸಂಘದ ತಾಲೂಕಾ ಅಧ್ಯಕ್ಷ ಚಂದ್ರಶೇಖರ ಸಾರಂಗಿ, ಬಸವರಾಜ ಪಾಶ್ಚಾಪೂರೆ, ಶ್ರೀಶೈಲ ಮುತ್ನಾಳೆ ಮುಂತಾದವರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here