ರಾಜ್ಯ ಕಾಂಗ್ರೆಸ್ ಯುವ ಘಟಕದಿಂದ ಸುಮಾರು 7 ಲಕ್ಷ ಸದಸ್ಯತ್ವ ಗುರಿ

0
13
loading...

ಚಿಕ್ಕೋಡಿ 17: ರಾಜ್ಯ ಕಾಂಗ್ರೆಸ್ ಯುವ ಘಟಕದಿಂದ ಸುಮಾರು 7 ಲಕ್ಷ ಯುವಕರನ್ನು ಯುವ ಕಾಂಗ್ರೆಸ್ ಸದಸ್ಯರನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಕೆ.ಎಸ್ ತಿಳಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅ. 22 ರಿಂದ ನ. 18ರವರೆಗೆ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದ್ದು, ಅ. 22 ರಂದು ಬೆಂಗಳೂರಿನ ಗಾಂಧಿನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಬೃಹತ್ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. 2013ರಲ್ಲಿ 3.50 ಲಕ್ಷ ಜನರನ್ನು ಸದಸ್ಯರನ್ನಾಗಿ ಮಾಡಲಾಗಿತ್ತಾದರೂ ಇದೀಗ ಮತ್ತೊಮ್ಮೆ ಅಭಿಯಾನ ಆರಂಭಿಸಲಾಗಿದೆ ಎಂದರು.
ಯುವ ಜನಾಂಗ ಕಾಂಗ್ರೆಸ್‍ನತ್ತ ಹೆಚ್ಚಿನ ಒಲವು ಹೊಂದಿದ್ದು, ರಾಜ್ಯದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ ಪ್ರತಿ ತಿಂಗಳು ಕನಿಷ್ಠ ಎರಡು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಗುರಿ ಹೊಂದಲಾಗಿದೆ. ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ಧ ಪತ್ರ ಚಳುವಳಿ ಮಾಡಿದೆ. ಮಹಾದಾಯಿ ಮತ್ತು ಕಾವೇರಿ ವಿಷಯ ಕುರಿತು ಹಲವಾರು ಹೋರಾಟಗಳನ್ನು ಯುವ ಕಾಂಗ್ರೆಸ್ ಮಾಡಿದೆ ಎಂದು ಹೇಳಿದರು.
ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನವೀನ, ಚಿಕ್ಕೋಡಿ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮರ್ದಿ, ಚಿಕ್ಕೋಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುದ್ದುಸಾರ ಜಮಾದಾರ, ಲತೀಪ ಪೀರಜಾದೆ, ಸಾಬೀರ ಜಮಾದಾರ ಮುಂತಾದವರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here