ವಿಶ್ವ ಕೈ ತೊಳೆಯುವ ದಿನ ಆಚರಣೆ

0
111
loading...

ಹಾನಗಲ್ಲ: ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ಕಾಳಜಿ ವಹಿಸುವಂತೆ ಶಿಕ್ಷಕ ಜಿ.ಎಸ್.ಮುಚ್ಚಂಡಿ ನುಡಿದರು.
ತಾಲೂಕಿನ ಸರಕಾರಿ ದ್ಯಾಮನಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆ ಹಾಗೂ ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಹಾರ ಸೇವನೆಗೂ ಮೊದಲು ಕೈಕಾಲುಗಳನ್ನು ಸ್ವಚ್ಛವಾಗಿ ತೊಳೆಯಬೇಕು. ಇದರಿಂದ ಹಾನಿಕಾರಕ ಕೀಟಾಣುಗಳು ಮನುಷ್ಯನ ಶರೀರ ಸೇರುವುದಿಲ್ಲ. ಈ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಕೈ ತೊಳೆಯುವ ದಿನ ಆಚರಿಸಲಾಗುತ್ತಿದೆ ಎಂದು ಹೇಳಿದ ಅವರು ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಸಮುದಾಯವೂ ಕೈ ಜೋಡಿಸಬೇಕಿದೆ. ಸರಕಾರದ ಜತೆಗೆ ಸಮುದಾಯವೂ ಕಾಳಜಿ ವಹಿಸಿದರೆ ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್‍ಡಿಎಂಸಿ ಅಧ್ಯಕ್ಷ ಬಿ.ಎಚ್.ಚನ್ನಗೌಡ್ರ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸದಿದ್ದರೆ ಭವಿಷ್ಯದಲ್ಲಿ ಸಂಕಷ್ಟ ಎದುರಾಗುವ ಭೀತಿ ಇದೆ ಎಂದರು.
ಶಿಕ್ಷಕರಾದ ಎಸ್.ಎಫ್.ಕಠಾರಿ, ಎಸ್.ವಿ.ಮಡ್ಲೂರ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here