ನಾಳೆ ತಾಲೂಕುಮಟ್ಟದ ಕುಂದುಕೊರತೆ ಸಭೆ

0
17
loading...

ಖಾನಾಪುರ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಾಗರಿಕರ ತಾಲೂಕುಮಟ್ಟದ ಕುಂದುಕೊರತೆ ಸಭೆಯನ್ನು ಡಿ.17ರಂದು ಮುಂಜಾನೆ 11 ಗಂಟೆಗೆ ಪಟ್ಟಣದ ರೈಲು ನಿಲ್ದಾಣ ರಸ್ತೆಯ ಪಟ್ಟಣ ಪಂಚಾಯ್ತಿ ಮಂಗಲ ಕಾರ್ಯಾಲಯದಲ್ಲಿ ಶಾಸಕ ಅರವಿಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ. ಈ ಸಭೆಗೆ ತಾಲೂಕಿನ ತಾಲೂಕುಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ವಾಣಿಜ್ಯ ಸಂಸ್ಥೆಗಳ ವ್ಯವಸ್ಥಾಪಕರು ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಾಗರಿಕರು ಭಾಗವಹಿಸಲು ತಹಸೀಲ್ದಾರ್‌ ಶಿವಾನಂದ ಉಳ್ಳೇಗಡ್ಡಿ ಪ್ರಕಟಣೆಯಲ್ಲಿ ಕೋರಿದ್ದಾರೆ.

loading...

LEAVE A REPLY

Please enter your comment!
Please enter your name here