ಪತ್ನಿಯ ಅನಾರೋಗ್ಯದಿಂದ ಮನ ನೊಂದು ಪತಿ ಸಾವು

0
16
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಪತ್ನಿಯ ಅನಾರೋಗ್ಯದ ಬಗ್ಗೆ ಮನನೊಂದು ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಬರಗಲ್ಲಿಯಲ್ಲಿ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಳಗಾವಿ ತಾಲೂಕಿನ ನಂದಿಹಳ್ಳಿ ಗ್ರಾಮದ ಮಹದೇವ ಪಕ್ಕಿರಾ ಕುರಬರ (45) ಎಂದು ಗುರುತಿಸಲಾಗಿದೆ.
ಪತ್ನಿಗೆ ಪದೇ ಪದೇ ಆರೋಗ್ಯ ಹದಗೆಡುತ್ತಿರುವುದರಿಂದ ಹಲವು ಬಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದ್ದರೂ, ಗುಣಮುಖರಾಗದೇ ಇರುವುದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಪ್ರಕರಣದ ಕುರಿತು ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...

LEAVE A REPLY

Please enter your comment!
Please enter your name here