ವಾರಕ್ಕೊಮ್ಮೆ ಜನರ ಅಹವಾಲು ಸ್ವೀಕಾರ : ಸಚಿವೆ ಉಮಾಶ್ರೀ

0
15
loading...

ಬಾಗಲಕೋಟೆ: ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವಾರಕ್ಕೆ ಒಂದು ದಿನ ಜನರ ಅಹವಾಲುಗಳನ್ನು ಆಲಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಉಮಾಶ್ರೀ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲಾ ಆಡಳಿತ ಭವನಕ್ಕೆ ಆಗಮಿಸಿ, ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಶೀಘ್ರದಲ್ಲಿಯೇ ಜಿಲ್ಲಾ ಕೇಂದ್ರದಲ್ಲಿ ಕಚೇರಿಯನ್ನು ಆರಂಭಿಸಿ, ವಾರಕ್ಕೊಮ್ಮೆ ಜನರ ಅಹವಾಲುಗಳನ್ನು ಆಲಿಸಲಾಗುವುದು. ತೇರದಾಳ ಮತಕ್ಷೇತ್ರದಲ್ಲಿಯೂ ಸಹ ಅಹವಾಲುಗಳನ್ನು ಆಲಿಸಲು ಒಂದು ದಿನ ಮೀಸಲಿರಿಸಲಾಗುವುದೆಂದು ಸಚಿವರು ತಿಳಿಸಿದರು.

ಸರಕಾರ ಯೋಜನೆಗಳ ಅನುಷ್ಠಾನದಲ್ಲಿ ನಿರಾಶಕ್ತಿ ತೋರುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಯಾವ ಅಧಿಕಾರಿಗಳು ನೆಪ ಹೇಳದೇ ಕಾರ್ಯಕೈಗೊಳ್ಳಬೇಕು. ಜನರಿಗೆ ಸ್ಪಂದಿಸುವಂತಹ ಕೆಲಸ ಮಾಡುವತ್ತ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುವತ್ತ ಗಮನ ಹರಿಸುವುದಾಗಿ ತಿಳಿಸಿದ ಸಚಿವರು ಕಲಾವಿದರ ಪಿಂಚಣಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಕಾಸ ಸುರಳಕರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎನ್‌.ನಾಗರಾಜ, ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಎನ್‌.ರುದ್ರೇಶ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here